Site icon PowerTV

ಸೋಲಿನಿಂದ ನಿಖಿಲ್​ ಎದೆಗುಂದದೆ ಮತ್ತೆ ಪಕ್ಷ ಸಂಘಟನೆ ಮಾಡಬೇಕು: ಜಿ.ಟಿ.ದೇವೇಗೌಡ

ಮೈಸೂರು: ಶಾಸಕ ಜಿ.ಟಿ ದೇವೇಗೌಡ ಹೇಳಿಕೆ ಉಪಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ್ದು. ಚುನಾವಣೆ ಸಂಧರ್ಭದಲ್ಲಿ ಯಾಕೆ ಪ್ರಚಾರಕ್ಕೆ ಹೋಗಲಿಲ್ಲ ಎಂಬುದನ್ನು ವಿವರಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಜಿಟಿ.ದೇವೇಗೌಡ ‘ಚನ್ನಪಟ್ಟಣ ಚುನಾವಣೆಗೆ ನನ್ನನ್ನು ಯಾರು ಕರೆದಿದ್ದರು ಹೇಳಿ.ಅಭ್ಯರ್ಥಿಯು ಕರೆಯಲಿಲ್ಲ. ಅಭ್ಯರ್ಥಿಯ ತಾಯಿ ಕರೆಯಲಿಲ್ಲ ಮತ್ತು ದೇವೇಗೌಡರು ಕರೆಯಲಿಲ್ಲ.
ಅವರಿಗೆ ನನ್ನ ಅವಶ್ಯಕತೆ ಇದ್ದಂತೆ ಕಾಣುತ್ತಿಲ್ಲ.ಈಗ ನಾನು ಅವರಿಗೆ ಬೇಡ, ನನ್ನ ಮಗ ಬೇಕು.ಜಿ.ಟಿ ದೇವೇಗೌಡನಿಗೆ ವಯಸ್ಸಾಗಿದೆ, ರಾಜಕೀಯದಿಂದ ನಿವೃತ್ತಿಯಾಗಲಿ ಎಂದು ಅವರು ಬಯಸುತ್ತಿದ್ದಾರೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಜಿ.ಟಿ.ದೇವೇಗೌಡ ‘ನನಗೆ ರಾಜಕೀಯದಿಂದ ನಿವೃತ್ತಿ‌ಕೊಡಿಸಲು ಅವರು ತಯಾರಿದ್ದಾರೆ. ಅವರಿಗು ಗೊತ್ತು ಕಾಂಗ್ರೆಸ್ ಹೌಸ್ ಫುಲ್ ಆಗಿದೆ, ಜೆಡಿಎಸ್ ಬಿಜೆಪಿ ಜೊತೆಯಲ್ಲಿ ಒಂದಾಗಿವೆ. ಅಲ್ಲಿಗೆ  ಜಿ.ಟಿ.ಡಿಗೆ ಯಾವ ಪಕ್ಷದಲ್ಲು ಸ್ಥಾನ ಇಲ್ಲ. ಹೀಗಾಗಿ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆಯಲ್ಲಿದ್ದಾರೆ‌. ಎಂದು ಹೇಳಿದರು.ಕುಮಾರಸ್ವಾಮಿ ಕುರಿತು ಮಾತನಾಡಿದ ಜಿ.ಟಿ.ಡಿ ‘ನನಗೂ ಕುಮಾರಸ್ವಾಮಿ ನಡುವೆ ಯಾವ ಮುನಿಸು ಇಲ್ಲ. ಆದರೆ ಅವರೆ ನಮ್ಮಿಬ್ಬರ ಮಧ್ಯೆ ಜಗಳವಿದೆ ಎಂದು ಬಿಂಬಿಸುತ್ತಾರೆ. ನಾನೇನು ಮಾಡಲಿ ಹೇಳಿ.

ನಿಖಿಲ್ ಚನ್ನಪಟ್ಟಣದಲ್ಲಿ ಸೋಲಬಾರದಿತ್ತು. ಮೂರು ಸೋಲಿನಿಂದ ಅವರಿಗೆ ಬೇಸರವಾಗಿರುವುದು ನಿಜ.
ಅವರು ಎದೆಗುಂದಬಾರದು. ಧೈರ್ಯವಾಗಿ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಮೂರು ಭಾರಿ ಸೋತವರು ಗೆದ್ದು ಮಂತ್ರಿಯಾಗಿ ಉನ್ನತ ಸ್ಥಾನಕ್ಕೆ ಹೋಗಿದ್ದಾರೆ. ನನಗೂ ಚನ್ನಪಟ್ಟಣ ಸೋಲಿಗೆ ಕಾರಣ ಗೊತ್ತಿಲ್ಲ. ನಾನು ಆ ಕ್ಷೇತ್ರಕ್ಕೆ ಪ್ರಚಾರಕ್ಕೆ ಹೋಗಿಲ್ಲ.ಮ ಏನಾಗಿದೆ ಎಂಬುದನ್ನ ನೋಡಿ ಹೇಳುತ್ತೇನೆ.
ನಮಗೆ ನಿಖಿಲ್ ಗೆಲ್ಲುವ ವಿಶ್ವಾಸ ಇತ್ತು ಎಂದು ಹೇಳಿದರು.

Exit mobile version