Site icon PowerTV

ತನ್ನದೆ ಪ್ರತಿಮೆ ಅನಾವರಣಗೊಳಿಸಿದ ಬಂಗಾಳ ರಾಜ್ಯಪಾಲ: ನಾಚಿಕೆಗೇಡು ಎಂದು ಮಮತಾ ಬ್ಯಾನರ್ಜಿ

ಕೊಲ್ಕತ್ತಾ : ಪಶ್ಚಿಮ ಬಂಗಾಳದ ರಾಜಭವನದ ಆವರಣದಲ್ಲಿ ಆಯೋಜಿಸಿದ್ದ ಶಾಲಾ ವಿದ್ಯಾರ್ಥಿಗಳ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರದರ್ಶನ ಉದ್ಘಾಟನೆಗೂ ಮುಂಚಿತವಾಗಿ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು, ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದರ ಫೋಟೋ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ರಾಜ್ಯಪಾಲರು ಅಧಿಕಾರದಲ್ಲಿರುವಾಗಲೇ ತಮ್ಮ ಪ್ರತಿಮೆಯನ್ನು ಸ್ಥಾಪಿಸಿದ ಬಗ್ಗೆ ಟೀಕೆಗಳು ವ್ಯಕ್ತವಾದವು.

ಇನ್ನು ಆಡಳಿತಾರೂಢ ತೃಣಮೂಲಕ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದೊಂದು ‘ಪ್ರಚಾರದ ಸ್ಟಂಟ್’ ಎಂದಿದೆ. ‘ಇದು ನಾಚಿಕೆಗೇಡು, ನಮ್ಮ ರಾಜ್ಯದ ದೌರ್ಭಾಗ್ಯ’ ಎಂದು ಸಿಪಿಎಂ ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ. ರಾಜ್ಯಪಾಲರಾಗಿ ತಮ್ಮ ಅಧಿಕಾರ ಅವಧಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜಭವನದಲ್ಲಿ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬೆಳವಣಿಗೆ ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ. ಇದೊಂದು ನಾಚಿಕೆಗೇಡಿನ ಸಂಗತಿ, ತಮ್ಮದೇ ಪ್ರತಿಮೆ ಅನಾವರಣಗೊಳಿಸಿರುವುದು ಸ್ವ-ಪ್ರತಿಷ್ಠೆಯನ್ನು ಪ್ರದರ್ಶಿಸುತ್ತದೆ ಎಂದು ವಿರೋಧ ಪಕ್ಷ ನಾಯಕರು ಟೀಕಿಸಿದ್ದಾರೆ.

Exit mobile version