Site icon PowerTV

ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ಆತ್ಮಹ*ತ್ಯೆ

ಬೆಳಗಾವಿ : 20 ದಿನದ ಮೇಲೆ ಗ್ರಾಮಕ್ಕೆ ಆಗಮಿಸಿದ್ದ ಯೋಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಾಹಿತಿ ದೊರೆತಿದ್ದು. ಬೆಳಗಾವಿ ಜಿಲ್ಲೆಯ ದೇವಗಾಂವ ಗ್ರಾಮದಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯೋಧನ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.

ಬೆಳಗಾವಿ ಜಿಲ್ಲೆಯ, ಕಿತ್ತೂರು ತಾಲೂಕಿನ, ದೇವಗಾಂವ ಗ್ರಾಮದಲ್ಲಿ ಘಟನೆ ನಡೆದಿದ್ದು. ನರೇಶ್ ಅಗಸರ(28) ಎಂಬ ಭಾರತೀಯ ಸೇನೆಯ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರ ಎಂದು ಮಾಹಿತಿ ದೊರೆತಿದೆ. ಸುಮಾರು ನಾಲ್ಕು ವರ್ಷದಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನರೇಶ್. ಇಪ್ಪತ್ತು ದಿನಗಳ ಹಿಂದೆ ರಜೆ ಮೇಲೆ ಊರಿಗೆ ಬಂದಿದ್ದರು. ಇಂದು ಮತ್ತೆ ಕರ್ತವ್ಯಕ್ಕೆ ತೆರಳಬೇಕಿದ್ದ ಯೋಧ ನರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು
ನರೇಶ್ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ. ಸ್ಥಳಕ್ಕೆ ಕಿತ್ತೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ಮಾಹಿತಿ ದೊರೆತಿದೆ.

Exit mobile version