Site icon PowerTV

ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕೆ‌ ಮುಂದಾದ ಸರ್ಕಾರ !

ಮೈಸೂರು : ನಾಡ ಅಧಿದೇವತೆ ಚಾಮುಡೇಶ್ವರಿಗೆ ಚಿನ್ನದ ರಥ ನಿರ್ಮಿಸಲು ಸರ್ಕಾರಕ್ಕೆ ವಿಧಾನ ಪರಿಷತ್​ ಸದಸ್ಯ ದಿನೇಶ್​ ಗೂಲಿಗೌಡ ಪ್ರಸ್ತಾವನೆ ಸಲ್ಲಿಸಿದ್ದು. ಸಿಎಂ. ಸಿದ್ದರಾಮಯ್ಯನವರು ಕೂಡ ಪ್ರಸ್ತಾವನೆಗೆ ಸ್ಪಂದನೆ ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಚಾಂಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕೆ‌ ಸರ್ಕಾರದ ಹೆಜ್ಜೆ ಇಟ್ಟಿದ್ದು. ಚಿನ್ನದ ರಥ ನಿರ್ಮಿಸಲು MLC ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದು. ಅದಕ್ಕೆ ಸಿಎಂ ಸಿದ್ದರಾಮಯ್ಯನು ಕೂಡ ಸ್ಪಂದಸಿದ್ದು. ಕೂಡಲೆ ಕಂದಾಯ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಆದೇಶಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಅಂದಾಜು 100 ಕೋಟಿ ರೂಪಾಯಿ ವೆಚ್ಚದಲ್ಲಿ ಚಿನ್ನದ ರಥ ನಿರ್ಮಿಸಲು ಮನವಿ ಸಲ್ಲಿಸಲು ಸಿದ್ದತೆ ನಡೆಸಿದ್ದು. ದೇವಸ್ಥಾನದಲ್ಲಿ ಚಿನ್ನವನ್ನು ಸಂಗ್ರಹಿಸಲು ಹುಂಡಿಯನ್ನು ಇಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.

Exit mobile version