Site icon PowerTV

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಕಾಲಿವುಡ್​ ನಟ ಸೂರ್ಯ ದಂಪತಿ

ಕೊಲ್ಲೂರು : ಕಾಲಿವುಡ್​ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದು, ದೇವಾಲಯದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಕೇವಲ ಸಾಮಾನ್ಯರು ಮಾತ್ರವಲ್ಲದೆ, ಸೆಲೆಬ್ರಿಟಿಗಳು ಕೂಡ ಇಲ್ಲಿಗೆ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ನೆನ್ನೆ ದೇವಾಲಯಕ್ಕೆ ಭೇಟಿ ನೀಡಿದ ನಟ ಸೂರ್ಯ ತಮ್ಮ ಧರ್ಮ ಪತ್ನಿ ಜ್ಯೋತಿಕಾ ಜೊತೆ ದೇವಾಲಯದಲ್ಲಿ ನಡೆದ ಚಂಡಿಕಾಹೋಮದಲ್ಲಿ ಭಾಗವಹಿಸಿದರು ಹಾಗೂ ಇಂದು ನಡೆದ ಪೂರ್ಣಾಹುತಿಯಲ್ಲಿಯು ಭಾಗವಹಿಸಿದರು ಎಂದು ಮಾಹಿತಿ ದೊರೆತಿದೆ. ನಟ ಸೂರ್ಯನಿಗೆ ಕೇವಲ ತಮಿಳು ನಾಡಿನಲ್ಲಿ ಮಾತ್ರವಲ್ಲದೆ ಕರ್ನಾಟಕದಲ್ಲೂ ಸಾಕಷ್ಟು ಅಭಿಮಾನಿಗಳಿದ್ದು. ಸೂರ್ಯರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು ಎಂದು ತಿಳಿದು ಬಂದಿದೆ.

Exit mobile version