Site icon PowerTV

ಕೇವಲ 7 ರನ್​ಗಳಿಗೆ ಆಲೌಟ್​ ಮಾಡಿ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ನೈಜೀರಿಯಾ

ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ನೈಜಿರಿಯಾ ತಂಡ ಐವರಿ ಕೋಸ್ಟ್ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೈಜೀರಿಯಾ ಬ್ಯಾಟಿಂಗ್ ಆಯ್ದುಕೊಂಡಿತು. 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 271 ರನ್ ಕಲೆಹಾಕಿತು.

ನೈಜೀರಿಯಾ ಪರ ಸಲೀಂ 53 ಎಸೆತಗಳಲ್ಲಿ 112 ರನ್, ಐಸಾಕ್ ಒಕ್ಷೆ 23 ಎಸೆತಗಳಲ್ಲಿ 65 ರನ್, ಸುಲೈಮಾನ್ 50 ರನ್ ಸಿಡಿಸಿದ್ದರು.ಈ ಕಠಿಣ ಗುರಿ ಬೆನ್ನಟ್ಟಿದ ಐವರಿ ಕೋಸ್ಟ್ ತಂಡವು 7.3 ಓವರ್‌ಗಳಲ್ಲಿ ಕೇವಲ 7 ರನ್‌ ಗಳಿಸಿ ಆಲೌಟ್ ಆಯಿತು. ತಂಡದ 7 ಜನ ಬ್ಯಾಟರ್‌ಗಳು ಸೊನ್ನೆ ಸುತ್ತಿದ್ದರು.

ಆರಂಭಿಕ ಬ್ಯಾಟ್ಸ್‌ಮನ್ ಮೊಹಮ್ಮದ್ 4 ರನ್‌ಗಳಿಸಿದರೆ, ಇಬ್ರಾಹಿಂ, ಅಲೆಕ್ಸಿ ತಲಾ 1 ರನ್‌ಗಳಿಸಿದರು. ಈ ಮೂಲಕ ನೈಜಿರೀಯಾ ತಂಡವು 264 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಅಮೋಘ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಬೃಹತ್ ರನ್‌ಗಳ ಅಂತರದಿಂದ ಗೆದ್ದ ದಾಖಲೆ ಪಟ್ಟಿಯಲ್ಲಿ ನೈಜಿರಿಯಾ ಮೂರನೇ ಸ್ಥಾನಕ್ಕೇರಿದೆ. ಈ ಹಿಂದೆ ಅತ್ಯಂತ ಕಡಿಮೆ ರನ್‌ಗಳಿಗೆ ಆಲೌಟ್ ಆದ ದಾಖಲೆ ಮಂಗೋಲಿಯಾ ತಂಡದ ಹೆಸರಿನಲ್ಲಿತ್ತು. ಅದು ಕೇವಲ 10 ರನ್‌ಗಳಿಗೆ ಆಲೌಟ್ ಆಗಿತ್ತು.

Exit mobile version