Site icon PowerTV

ಮತ್ತೆ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರ !

ಬೆಂಗಳೂರು : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್​ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು. ಹಾಲಿನ ದರವನ್ನು ಹೆಚ್ಚಳ ಮಾಡವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಪಶುಸಂಗೋಪನೆ ಸಚಿವ ವೆಂಕಟೇಶ್​ ರೈತರಿಗೆ ಭರವಸೆ ನೀಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ಈಗಾಗಲೇ ಒಂದು ಬಾರಿ ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ಹಾಲಿ ದರ ಹೆಚ್ಚಳ ಮಾಡುವ ಬಗ್ಗೆ ಚಿಂತೆನೆ ನಡೆಸುತ್ತಿದೆ ಎಂದು ತಿಳಿದುಬಂದಿದ್ದು. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ.

ನಿನ್ನೆ ಕೆಎಂಎಫ್‌ ವತಿಯಿಂದ ನಡೆದ ವಿಚಾರಗೋಷ್ಟಿ ಕಾರ್ಯಕ್ರಮದಲ್ಲಿ ಪಶುಸಂಗೋಪನ ಸಚಿವ ವೆಂಕಟೇಶ್​ಹಾಲಿನ ಬೆಲೆ ಏರಿಕೆ ಬಗ್ಗೆ ಮುನ್ಸೂಚನೆ ನೀಡಿದ್ದು. ಹಾಲಿನ ದರ ಹೆಚ್ಚಳ ಮಾಡುವಂತೆ ರೈತರು ಮನವಿ ಮಾಡಿದ್ದಾರೆ. ಶೀಘ್ರದಲ್ಲೆ ಸರ್ಕಾರ ಮತ್ತು ಸಿದ್ದರಾಮಯ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ರೈತರಿಗೆ ಭರವಸೆ ನೀಡಿದರು.

Exit mobile version