Friday, September 12, 2025
HomeUncategorizedಸಚಿವ ಸಂಪುಟ ಆಕಾಂಕ್ಷಿಗಳಿಗೆ 'ಕೈ' ಕೊಟ್ಟ ಹೈಕಮಾಂಡ್​ !

ಸಚಿವ ಸಂಪುಟ ಆಕಾಂಕ್ಷಿಗಳಿಗೆ ‘ಕೈ’ ಕೊಟ್ಟ ಹೈಕಮಾಂಡ್​ !

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುಮಾರ್​ ಪಕ್ಷದ ಕೆಲ ವಿಚಾರಗಳ ಬಗ್ಗೆ ಹೈಕಮಾಂಡ್​ ನಾಯಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಇದರ ನಡುವೆ ಸಿಎಂ ಸಿದ್ದರಾಮಯ್ಯನವರ ಟೀಮ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲವು ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಉಭಯ ನಾಯಕರು ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ರಾಜ್ಯದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿ ಅನುದಾನ ಒದಗಿಸುವಂತೆ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ. ಪ್ರಮುಖವಾಗಿ, ನಬಾರ್ಡ್ ಹಣ ಹೆಚ್ಚಿಸುವಂತೆ ಮತ್ತು ಭದ್ರಾ ಮೇಲ್ದಂಡೆ ಅನುದಾನ ಹಾಗೂ ಕರ್ನಾಟಕದ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಮುಖವಾಗಿ ನಬಾರ್ಡ್‌ನ ನೆರವು ಕಡಿತ ಮಾಡಿರುವುದನ್ನು ಸರಿಪಡಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದಂತೆ ಅನುದಾನವನ್ನು ಕೂಡಲೇ ಒದಗಿಸಬೇಕು. ಮಹದಾಯಿ ಸಹಿತ ಕರ್ನಾಟಕದ ನೀರಾವರಿ ಯೋಜನೆಗೆ ಅನುಮತಿ ಕೊಡಿಸಬೇಕು. ಕರ್ನಾಟಕದ ಎಲ್ಲಾ ಮಹಾನಗರಗಳ ಅಭಿವೃದ್ದಿಗೆ ಪೂರಕವಾಗಿ ಅನುದಾನವನ್ನು ಒದಗಿಸಬೇಕೆಂದು ಮೋದಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ಸಹ ಪೂರಕವಾಗಿಯೇ ಸ್ಪಂದಿಸಿದ್ದಾರೆ ಅಂತಾ ತಿಳಿಸಿದ್ರು.

ರಾಜ್ಯಕ್ಕೆ ನಿರಂತರ ಅನ್ಯಾಯ ಆಗ್ತಿದೆ, ಮಹದಾಯಿ, ಮೇಕೆದಾಟುಗೆ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ ಯಾಕೆ… ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ..? ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸುವ ಮೂಲಕ ಅಪ್ಪ ಮಕ್ಕಳ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

ಇನ್ನೂ, ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತು ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ. ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ. ಆದ್ರೆ, ನಾಗೇಂದ್ರ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದ್ರೆ ಈಗಲೇ ಅಲ್ಲ. ಜೊತೆಗೆ, ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಇದನ್ನು ಹೈ ಕಮಾಂಡ್ ಗಮನಕ್ಕೆ ತರಲಾಗಿದ್ದು ಆಹ್ವಾನ ನೀಡಲಾಗಿದೆ ಅಂತಾ ತಿಳಿಸಿದ್ರು.

ಒಟ್ಟಿನಲ್ಲಿ ದೆಹಲಿ ಪ್ರವಾಸ ವೇಳೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡು ಬರ್ತಾರೆ ಎಂಬ ಸಂತಸದಲ್ಲಿದ್ದ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ನಿರಾಸೆ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments