Site icon PowerTV

ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ‌ 100 ಕೋಟಿ ಅನುದಾನ ನೀಡಿದ ಕೇಂದ್ರ ಸರ್ಕಾರ !

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ ನೀಡಿದ್ದು. ಯಲ್ಲಮ್ಮನ ದೇವಾಲಯದ ಅಭಿವೃದ್ದಿಗೆ ಕೇಂದ್ರ ಸರ್ಕಾರ 100 ಕೋಟಿ ಅನುದಾನ ನೀಡಿದೆ ಎಂದು ಕಾನೂನು ಸಚಿವ ಹೆಚ್​.ಕೆ ಪಾಟೀಲ್​ ಸುದ್ದಿಗೋಷ್ಟಿ ಮಾಡಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಮಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್ ‘ಕಳೆದ ಒಂದು ವರ್ಷದಿಂದ ನಮ್ಮ ರಾಜ್ಯ ಸರ್ಕಾರ ಮಾಡಿದ ಮನವಿಗೆ ಕೇಂದ್ರ ಸರ್ಕಾರ‌ ಸ್ಪಂದನೆ ಮಾಡಿದೆ. ಕೇಂದ್ರ ಸರ್ಕಾರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ‌ 100 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಯೋಜನಾ ಪ್ಲಾನ್ ಮಾಡಲು ತಿಳಿಸಿದ್ದೆನೆ. ಮೂರು ಸಾವಿರ ಭಕ್ತರಿಗೆ ಏಕಕಾಲದಲ್ಲಿ ಪ್ರಸಾದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕಟ್ಟಡದ‌ ಶಂಕುಸ್ಥಾಪನೆ ಆದಷ್ಟು ಬೇಗ ಆಗಲಿದೆ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪರವಾಗಿ ಧನ್ಯವಾದಗಳನ್ನು ತಿಳಿಸುವೆ ಎಂದು ಮಾಹಿತಿ ನೀಡಿದರು.

 

Exit mobile version