ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಚಂಡ ಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಭಾರೀ ಚಳಿಯ ವಾತವರಣ ನಿರ್ಮಾಣವಾಗಿದ್ದು. ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರಿನ ವಾತವರಣ ಫ್ರಿಡ್ಜ್ನಂತಾಗಿದ್ದು. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಜಿಟಿ ಜಿಟಿ ಮಳೆ ಆರಂಭವಾಗಿದೆ.
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಎಫೆಕ್ಟ್ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಫೆಂಗಲ್ ಚಂಡಮಾರುತದ ಆಗಮನ !
ಇಂದು ಸಂಜೆ ವೇಳೆಗೆ ಪುದುಚೇರಿ ಕರಾವಳಿ ತೀರಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು. ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಪುದುಚೇರಿ ಸೇರಿದಂತೆ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು. ಶಾಲೆ- ಕಾಳೇಜುಗಳಿಗೆ ರಜೆ ನೀಡಲಾಗಿದೆ.

ಪುದುಚೇರಿಯಲ್ಲಿ ಬಸ್ ಸಂಚಾರವನ್ನು ರದ್ದು ಮಾಡಿದ್ದು, ಐಟಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ(ವರ್ಕ್ ಫ್ರಮ್ ಹೋಮ್) ಸೂಚನೆ ನೀಡಿದ್ದಾರೆ. ಕೆಲವು ತೀರ ಪ್ರದೇಶಗಳಿಂದ ಜನರನ್ನು ಸ್ಥಳಾಂತರ ಮಾಡಿದ್ದು. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.
ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯದ ಮೇಲೂ ಕೊಂಚ ಪರಿಣಾಮ ಬೀರಲಿದ್ದು. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ 1 ಮತ್ತು 2ರಂದು ಅತಿಭಾರಿ ಮಳೆಯಾಗುವ ನೀರೀಕ್ಷೆಯಿದ್ದು. ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ ಎಂದು ಮಾಹಿತಿ ದೊರೆತಿದೆ.



Pinco ilə udmaq asandır. Yeni oyunçular üçün xüsusi təkliflər burada — pinco qeydiyyat. Pinco bahis et və nəticəni gözlə.
Pinco tətbiqi mobil üçün mükəmməldir.