Site icon PowerTV

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯ ಹುಂಡಿ ಎಣಿಕೆ : ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ !

ಮೈಸೂರು: ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು. ಹುಂಡಿಯಲ್ಲಿ ಭಾರೀ ಪ್ರಮಾಣದ ಕಾಣಿಕೆ ಹಣ ಸಂಗ್ರಹವಾಗಿದೆ ಎಂದು ಮಾಹಿತಿ ದೊರೆತಿದೆ.

ದೇವಾಲಯದ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು. ಈ ವೇಳೆ ಹುಂಡಿಯಲ್ಲಿ ಒಟ್ಟು 1,84,47,361/- ರೂ ಹಣ ಸಂಗ್ರಹವಾಗಿದೆ ಎಂದು ಮಾಹಿತಿ ದೊರೆತಿದೆ. ಹುಂಡಿಯಲ್ಲಿ ಒಟ್ಟು 63 ಗ್ರಾಂ ಚಿನ್ನ ಮತ್ತು 2 ಕೆಜಿ 100 ಗ್ರಾಂ ಬೆಳ್ಲಿ ಸಂಗ್ರಹವಾಗಿದ್ದು. ಅದಷ್ಟೆ ಅಲ್ಲದೆ ಅಮೇರಿಕಾದ 332 ಡಾಲರ್​, ಯೂರೋಪ್​ನ 25ಡಾಲರ್​, ವಿಯಟ್ನಾಂನ 2000,  ಸಿಂಗಪೂರ್​ನ 5 ಡಾಲರ್ ಹಾಗೂ ಪಿಲಿಪೈನ್ ದೇಶದ 50 ಕರೆನ್ಸಿಗಳು ಪತ್ತೆಯಾಗಿದೆ ಎಂದು ಮಾಹಿತಿ ದೊರೆತಿದೆ.

ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗಿಯಾಗಿದ್ದರು ಎಂದು ಮಾಹಿತಿ ದೊರೆತಿದ್ದು. ನಂಜುಂಡೇಶ್ವರ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾದ ಹಿನ್ನಲೆಯಲ್ಲಿ ಹುಂಡಿ ಎಣಿಕೆ ಕಾರ್ಯದಲ್ಲೂ ಹೆಚ್ಚಳವಾಗಿದೆ ಎಂದು ಮಾಹಿತಿ ದೊರೆತಿದೆ.

Exit mobile version