Site icon PowerTV

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ನುಗ್ಗಿದ KSRTC ಬಸ್ : 10ಕ್ಕೂ ಹೆಚ್ಚು ಜನರಿಗೆ ಗಾಯ !

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್​ವೊಂದು ನೀರಿನ ಕಾಲುವೆ ಒಳಗೆ ನುಗ್ಗಿದ ಘಟನೆ ನಡೆದಿದ್ದು. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಅಪಘಾತದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ಮಾಹಿತಿ ದೊರೆತಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಅಮೃತೂರು ಹೋಬಳಿಯ ದೊಡ್ಡ ಕಲ್ಲಹಳ್ಳಿ ಬಳಿ ಘಟನೆ ನಡೆದಿದೆ. ಹತ್ತಾರು ಪ್ರಯಾಣಿಕರನ್ನು ತುಂಬಿಕೊಂಡಿದ್ದ KSRTC ಬಸ್​ ಕುಣಿಗಲ್​​ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಹೇಮಾವತಿ ನಾಲೆಗೆ  ನುಗ್ಗಿದೆ. ಆದರೆ ಅದೃಷ್ಟವಶಾತ್​ ಯಾವುದೇ ದುರ್ಘಟನೆ ಸಂಭವಿಸಿಲ್ಲ ಎಂದು ಮಾಹಿತಿ ದೊರೆತಿದೆ.

ಸದ್ಯ ಹೇಮಾವತಿ ನಾಲೆ ತುಂಬಿ ಹರಿಯುತ್ತಿದ್ದು. ಸದ್ಯ ಘಟನೆಯಲ್ಲಿಬ ಯಾವುದೇ ಸಾವು ಸಂಭವಿಸಿಲ್ಲ ಎಂದು ಮಾಹಿತಿ ದೊರೆತಿದ್ದು. ಗಾಯಗೊಂಡ 10ಕ್ಕೂ ಹೆಚ್ಚು ಜನರನ್ನು ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ದೊರೆತಿದೆ.

 

Exit mobile version