Site icon PowerTV

ಫೆಂಗಲ್​ ಸೈಕ್ಲೋನ್​ ಎಫೆಕ್ಟ್​​ : ಮನೆ ಮೇಲೆ ಬಂಡೆ ಕುಸಿದು ಐವರು ಮಕ್ಕಳು ಸೇರಿ 7 ಮಂದಿ ಸಾವು !

ಚೆನೈ : ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ.

ಫೆಂಗಲ್ ಚಂಡಮಾರುತದಿಂದ ಪ್ರವಾಹದ ಅಬ್ಬರ ಮುಂದುವರಿದಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೇ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಮನೆ ಮೇಲೆ ಬಂಡೆ ಬಿದ್ದು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ದುರಂತದ ಸುದ್ದಿ ತಿಳಿದ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Exit mobile version