Site icon PowerTV

ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ !

ಕಲಬುರಗಿ: ಖಾಸಗಿ ಶಾಲಾ ಶಿಕ್ಷಕನೋರ್ವ  ವಿದ್ಯಾರ್ಥಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು. ಶಿಕ್ಷಕನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಮಾಹಿತಿನ ದೊರೆತಿದೆ.

ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು. ಖಾಸಗಿ ಶಾಲಾ ಶಿಕ್ಷಕ ‘ಹಾಜಿಮಲಂಗ’ ಎಂಬಾತ ಐದನೇ ತರಗತಿ ವಿಧ್ಯಾರ್ಥಿನಿ ಮೇಲೆ ನಿನ್ನೆ ಸಂಜೆ ಅತ್ಯಾಚಾರವೆಸಗಿದ್ದಾನೆ. ಘಟನೆ  ತಿಳಿಯುತ್ತಿದ್ದಂತೆ ವಿವಿಧ ಸಂಘಟನೆಗಳು ಶಿಕ್ಷಕನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದು. ಯಡ್ರಾಮಿ ತಾಲ್ಲೂಕನ್ನು ಬಂದ್​ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಯಡ್ರಾಮಿ ಠಾಣಾ ಪೋಲಿಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು. ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.

 

Exit mobile version