Site icon PowerTV

ಸರ್ಕಾರಿ ಶಾಲೆ ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕರು !

ಕೊಪ್ಪಳ : ಸರ್ಕಾರಿ ಶಾಲೆ ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದು. ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರ ನಡೆಗೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿರುವ ಭಾಗವಾಗಿದೆ. ಇಲ್ಲಿನ ಶಿಕ್ಷಣದ ಗುಣಮಟ್ಟವನ್ನು ಪ್ರತಿ ಭಾರಿ ಬರುವ SSLC ಮತ್ತು PUC ಪರೀಕ್ಷೆಯ ಫಲಿತಾಂಶದಿಂದ ಗುರುತಿಸಬಹುದು. ಆದರೆ ಇಲ್ಲೊಂದು ಮಾದರಿ ಶಾಲೆಯ ಶಿಕ್ಷಕರು ತಮ್ಮ ಶಾಲೆಯ ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದು. ಹೈದರಾಬಾದ್​​ಗೆ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ದಿದ್ದಾರೆ.

ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಸುಮಾರು 32 ಜನ ವಿಧ್ಯಾರ್ಥಿಗಳನ್ನು ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ  ಹೈದರಾಬಾದ್​ಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ.

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸಿದ ವಿಧ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದು. ಗ್ರಾಮಸ್ಥರು ಮತ್ತು ಶಿಕ್ಷಕರ ಸಹಾಯದಿಂದ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಈ ಪ್ರಯತ್ನಕ್ಕೆ ಎಲ್ಲಡೆಯಿಂದ ಪ್ರಶಂಸೆಗಳು ಹರಿದು ಬರುತ್ತಿವೆ.

Exit mobile version