Site icon PowerTV

ಪಂಚಮಸಾಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್​

ಬೆಳಗಾವಿ : ಸುವರ್ಣ ಸೌದದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು. ಈ ಬಾರಿಯು ಅಧಿವೇಶನದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ಕುರಿತಾಗಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ‘ ನಾನು ಕೂಡ ಪಂಚಮಸಾಲಿ ಮೀಸಲಾತಿಗಾಗಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.

ಪಂಚಮ ಸಾಲಿ ಸಮುದಾಯದಿಂದ ನಾಳೆ ಟ್ರ್ಯಾಕ್ಟರ್​​ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ಜಿಲ್ಲಾಡಳಿತದಿಂದ ಈ ಹೋರಾಟಕ್ಕೆ ನಿರ್ಬಂದ ಹೇರಲಾಗಿದೆ. ಇದರ ಕುರಿತಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​​ ‘ ಪ್ರತಿಭಟನೆಗೆ ನಿರ್ಬಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ. ಅಧಿವೇಶನ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಟ್ರ್ಯಾಕ್ಟರ್​ ನಿರ್ಬಂದ ಮಾಡಿ ಮುಂಜಾಗ್ರತಾ ಕ್ರಮ ಕೈಗೊಂಡಿರಬಹುದು. ಎಂದಯ ಹೇಳಿದರು.

ಮುಂದುವರಿದು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​ ‘ನಾನು ಗುರುಗಳ ಜೊತೆ ಮಾತನಾಡಿದ್ದೇನೆ. ಇಂದು ಸಂಜೆ 4 ಗಂಟೆಗೆ ನಾನು ಸ್ವಾಮೀಜಿಗಳು, ಸಿ.ಸಿ.ಪಾಟೀಲ್, ಬೆಲ್ಲದ ಸೇರಿದಂತೆ ಎಲ್ಲರೂ ಸಭೆ ಮಾಡ್ತೀವಿ. ಎಲ್ಲರೂ ಸೇರಿ ಸಭೆ ಮಾಡಿ ನಿರ್ಣಯ ಕೈಗೊಳ್ಳುತ್ತೇವೆ. ನಾನು ಸ್ವಾಮೀಜಿ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.  ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ. ನಾನು ಸಚಿವೆ ಇರುವುದರಿಂದ ವಿಧಾನಸಭೆ ಕಲಾಪದಲ್ಲಿ ಬಾವಿಗೆ ಇಳಿದು ಧರಣಿ ಮಾಡಕ್ಕಾಗಲ್ಲ. ಆದರೆ ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರ್ತೀನಿ ಎಂದು ಹೇಳಿದರು .

Exit mobile version