Site icon PowerTV

ಸಂಸತ್ ಭವನದ ದಾಳಿಗೆ 23 ವರ್ಷ: ಮೋದಿ, ರಾಹುಲ್ ಸೇರಿ ಗಣ್ಯರಿಂದ ಹುತಾತ್ಮರಿಗೆ ಶ್ರದ್ಧಾಂಜಲಿ

ದೆಹಲಿ : ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿ 23 ವರ್ಷ ಸಂದ ಹಿನ್ನೆಲೆಯಲ್ಲಿ ಆ ಭಯೋತ್ಪಾದಕ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸಂಸತ್‌ನಲ್ಲಿ ಆಯೋಜಿಸಲಾಯಿತು.

ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಗೆ ಇಂದಿಗೆ 23 ವರ್ಷ. 2001ರ ಡಿಸೆಂಬರ್ 13ರ ಇದೇ ದಿನ ಸಂಸತ್ತಿನ ಆವರಣಕ್ಕೆ ಲಗ್ಗೆ ಇಟ್ಟಿದ್ದ ಭಯೋತ್ಪಾದಕರು ಬಾಂಬ್ ಸ್ಫೋಟಗೊಳಿಸಿ ತಮ್ಮ ವಿಕೃತಿ ಮರೆದಿದ್ದರು. ಈ ಭಯೋತ್ಪಾದಕ ದಾಳಿಯಲ್ಲಿ ಅನೇಕರು ಸಾವನ್ನಪ್ಪಿದ್ದರು. ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿ 23 ವರ್ಷ ಆದ ಹಿನ್ನೆಲೆಯಲ್ಲಿ ಆ ಭಯೋತ್ಪಾದಕ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಸಂಸತ್‌ನಲ್ಲಿ ಆಯೋಜಿಸಲಾಯಿತು.

ಹುತಾತ್ಮ ಯೋಧರ ಸ್ಮರಣಾರ್ಥ ಸಂಸತ್ತಿನ ಆವರಣದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹಿತ ಹಲವು ಗಣ್ಯರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Exit mobile version