Site icon PowerTV

ಸಿಲಿಕಾನ್ ಸಿಟಿ ಕೂಲ್ ಕೂಲ್ : ಮಧ್ಯಾಹ್ನದ ವೇಳೆಗೆ ಭಾರಿಮಳೆ ಸಾಧ್ಯತೆ !

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು. ಇದರ ಪರಿಣಾಮ ಬೆಂಗಳೂರಿನ ಮೇಲು ಕೊಂಚ ಬಿದ್ದಿದೆ. ರಾಜಧಾನಿಯಲ್ಲಿ ತಂಪು ತಂಪು ಕೂಲ್​ ಕೂಲ್​ ವಾತವರಣ ನಿರ್ಮಾಣವಾಗಿದ್ದು. ಇಂದು ಮಧ್ಯಾಹ್ನದ ವೇಳೆಗೆ ಭಾರಿ ಮಳೇಯಾಗುವ ಸಂಭವ ಇದೆ ಎಂದು ಮಾಹಿತಿ ದೊರೆತಿದೆ.

ನೆನ್ನೆ ಮುಂಜಾನೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು. ಸಾಧರಣ ಮಳೆಯಾಗುತ್ತಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತವಾದ ಹಿನ್ನಲೆಯಲ್ಲಿ ಈ ರೀತಿ ವಾತವರಣ ನಿರ್ಮಾಣವಾಗಲಿದ್ದು. ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಗರದ ಕೆಲ ಭಾಗದಲ್ಲಿಂದು ಗುಡುಗು ಸಹಿತ ಮಳೆಯಾಗೋ ಸಾಧ್ಯೆತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಇಂದು ಉಷ್ಣಾಂಶ ಕಡಿಮೆ ಇರಲಿದೆ ಎಂದು ಮಾಹಿತಿ ದೊರೆತಿದ್ದು. ಗರಿಷ್ಟ 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಟ 19 ಡಿಗ್ರಿ ಉಷ್ಣಾಂಶ ಇರಲಿದೆ ಎಂದು ಮಾಹಿತಿ ದೊರೆತಿದೆ

Exit mobile version