Monday, August 25, 2025
Google search engine
HomeUncategorizedವೃಕ್ಷ ಮಾತೆ ತುಳಸಿ ಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ !

ವೃಕ್ಷ ಮಾತೆ ತುಳಸಿ ಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ !

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು  ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಅವರ ಕೆಲಸ ನಮ್ಮ ಭೂಮಿಯನ್ನು ರಕ್ಷಿಸಲು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.

ಪರಿಸರಕ್ಕೆ ಜೀವನವನ್ನೆ ಮುಡಿಪಾಡಿಟ್ಟ ವೃಕ್ಷ ಮಾತೆ !

ವೃಕ್ಷ ಮಾತೆ ಎಂದು ಜನಜನಿತರಾಗಿರುವ ತುಳಸಿಗೌಡ ಅವರು ನೆನ್ನೆ ರಾತ್ರಿ ವಯೋಸಹಜ ಕಾಯಿಲೆಯಿಂದ ಮೃತ ಪಟ್ಟಿದ್ದು. ಅವರ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಆದರೆ ಪದ್ಮಶ್ರೀ ಪುರಸ್ಕೃತರಾದರು ಕೂಡ ತುಳಸಿಗೌಡ ಅವರು ಎಂದು ಕೂಡ ಯಾವುದೇ ಸಂಭಾವನೆ ಬಯಸದೆ ಪರಿಸರ ರಕ್ಷಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೆ ಪತಿಯನ್ನು ಕಳೆದುಕೊಂಡ ಇವರು ಇಬ್ಬರು ಮಕ್ಕಳನ್ನು ಬೆಳೆಸಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿಕೊಂಡರು.

ಅರಣ್ಯ ಅಧಿಕಾರಿಗಳು ಆದೇಶ ನೀಡದಿದ್ದರು ಸ್ವಯಂ ಪ್ರೇರಿತರಾಗಿ ಕಾರ್ಯ ಗಿಡಗಳನ್ನು ನೆಟ್ಟು ಪೋಷಿಸುತ್ತಾ ಬಂದ ತುಳಸಿ ಗೌಡ ಪ್ರತಿ ವರ್ಷಕ್ಕೆ 30 ಸಾವಿರದಂತೆ ಲಕ್ಷಾಂತರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದೆ ಕಾರಣಕ್ಕೆ ಅನೇಕ ಪ್ರಶಸ್ತಿಗಳು ಕೂಡ ಇವರನ್ನು ಅರಸುತ್ತಾ ಬಂದಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments