Site icon PowerTV

ಅಮಿತ್ ಶಾಗೆ ಹುಚ್ಚು ಹಿಡಿದಿದೆ ಎಂದ RJD ನಾಯಕ ಲಾಲುಪ್ರಸಾದ್​​ ಯಾದವ್​ !

ದೆಹಲಿ : ಈ ವಾರದ ಆರಂಭದಲ್ಲಿ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರ ಭಾಷಣದ ಕುರಿತು ಆಕ್ರೋಶ ಭುಗಿಲೆದ್ದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಹಿರಿಯ ರಾಜಕಾರಣಿ ಲಾಲು, “ಅಮಿತ್ ಶಾಗೆ ಹುಚ್ಚು ಹಿಡಿದಿದೆ ಎಂದಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ಅವರು ರಾಜೀನಾಮೆ ನೀಡಬೇಕು ಮತ್ತು ರಾಜಕೀಯವನ್ನು ತ್ಯಜಿಸಬೇಕು ಎಂದು ಗುರುವಾರ ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರ ಭಾಷಣದ ಕುರಿತು ಆಕ್ರೋಶ ಭುಗಿಲೆದ್ದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಹಿರಿಯ ರಾಜಕಾರಣಿ ಲಾಲು, “ಅಮಿತ್ ಶಾಗೆ ಹುಚ್ಚು ಹಿಡಿದಿದೆ. ಅವರಿಗೆ ನಮ್ಮ ಪೂಜ್ಯ ಬಾಬಾಸಾಹೇಬರ ಮೇಲೆ ದ್ವೇಷ ಇದೆ. ಅವರ ಹುಚ್ಚುತನವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದರು.

ಖಂಡಿತವಾಗಿಯೂ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇನೆ. ಅವರು ರಾಜೀನಾಮೆ ನೀಡಬೇಕು. ಅಷ್ಟೇ ಅಲ್ಲ, ಅವರು ರಾಜಕೀಯವನ್ನು ತ್ಯಜಿಸಬೇಕು” ಎಂದು ಬಿಜೆಪಿಯ ಕಟ್ಟಾ ವಿರೋಧಿಯಾಗಿರುವ ಆರ್‌ಜೆಡಿ ವರಿಷ್ಠರು ಹೇಳಿದ್ದಾರೆ.

Exit mobile version