Monday, August 25, 2025
Google search engine
HomeUncategorizedಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್​ ಕರೆ : ಪ್ರತಿಭಟನಕಾರರ ಬಂಧನ !

ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್​ ಕರೆ : ಪ್ರತಿಭಟನಕಾರರ ಬಂಧನ !

ಚಿಕ್ಕಮಗಳೂರು : ಶಾಸಕ ಸಿ.ಟಿ‌ ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಿದ್ದು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಿದ್ದು. ಹನುಮಂತಪ್ಪ ಸರ್ಕಲ್‌ನಲ್ಲಿ ನೂರಾರು ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬಂದ್​ಗೆ ಮುನ್ನ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರು !

ಶಾಸಕ ಸಿ.ಟಿ ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ಹಿನ್ನಲೆ. ಬಂದ್‌ಗೂ ಮುನ್ನ ಸಿ.ಟಿ ರವಿ ಮನೆಯಲ್ಲಿ ಪೂರ್ವಭಾವಿ ಸಭೆ ಕರೆದ ಬಿಜೆಪಿ ಮುಖಂಡರು ಬಂದ್​ನ ಪೂರ್ವಭಾವಿ ರೂಪುರೇಷೆಗಳನ್ನು ಚರ್ಚಿಸಿದರು ಹಾಗೂ ಚಿಕ್ಕಮಗಳೂರು ಜನರೆ ಸ್ವಯಂ ಪ್ರೇರಿತವಾಗಿ ಬಂದ್​ ಮಾಡುವಂತೆ ಕರೆ ನೀಡಿದ್ದಾರೆ.

ನೂರಾರು ಕಾರ್ಯಕರ್ತರು ಪೊಲೀಸ್​ ವಶಕ್ಕೆ !

ಚಿಕ್ಕಮಗಳೂರು ಬಂದ್​ ಆದ ಹಿನ್ನಲೆಯಲ್ಲಿ ಪ್ರತಿಭಟನಾಕಾರರು ಹನುಮಂತಪ್ಪ‌ ಸರ್ಕಲ್‌ನಿಂದ ಪ್ರತಿಭಟನೆ ಆರಂಭವಾಗಿದ್ದು. ಬಂದೋಬಸ್ತ್​ಗಾಗಿ  ಕೆಎಸ್‌ಆರ್‌ಪಿ ತುಕಡಿ, ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜೊತೆಗೆ ಪಶ್ಚಿಮ ವಲಯ ಐಜಿಪಿ ಅಮಿತ್‌ಸಿಂಗ್ ನಗರದಲ್ಲಿ ಮೊಖಂ ಹೂಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ ವೇಳೆ ನಡು ರಸ್ತೆಯಲ್ಲಿ ಮಲಗಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದು. ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ ಮಾಡಿದ್ದು. ಬಿಜೆಪಿ ಕಾರ್ಯಕರ್ತ ಇದನ್ನು ಖಂಡಿಸಿದ್ದಾರೆ. ಇದಕ್ಕೆ ಖಂಡಿಸಿ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments