Tuesday, August 26, 2025
Google search engine
HomeUncategorizedಗೋಳಗುಮ್ಮಟ್ಟಕ್ಕೆ ದೀಪಾಲಂಕಾರದ ಸೊಬಗು : ಸಚಿವ ಎಂ.ಬಿ ಪಾಟೀಲ್​ರಿಂದ ಚಾಲನೆ !

ಗೋಳಗುಮ್ಮಟ್ಟಕ್ಕೆ ದೀಪಾಲಂಕಾರದ ಸೊಬಗು : ಸಚಿವ ಎಂ.ಬಿ ಪಾಟೀಲ್​ರಿಂದ ಚಾಲನೆ !

ವಿಜಯಪುರ : ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ಹಾಗೂ ವಿಶ್ವಗುರು ಬಸವಣ್ಣನವರ ಜನ್ಮಸ್ಥಳವಾದ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ವಿಫುಲ ಅವಕಾಶಗಳಿದ್ದು, ಜಿಲ್ಲೆಯು ಅಭಿವೃದ್ದಿ ಪಥದಲ್ಲಿ ಸಾಗುತ್ತಿದ್ದು, ಸಾರ್ವಜನಿಕರು ಜಿಲ್ಲೆಯ ಅಭಿವೃದಿಗೆ ಕೈ ಜೋಡಿಸಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರು ಹೇಳಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ರಿನ್ಯೂ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಇವರ ಸಹಯೋಗದಲ್ಲಿ ಗೋಳಗುಮ್ಮಟ ಸ್ಮಾರಕಕ್ಕೆ ಸೌರಶಕ್ತಿ ವಿದ್ಯತ್ ದೀಪಾಲಂಕರ ಲೋಕಾರ್ಪಣೆಗೊಳಿಸಿ ಮಾತಾನಾಡಿದ ಅವರು, ಐತಿಹಾಸಿಕ ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ದೊರಕಿಸುವ ನಿಟ್ಟಿನಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಇದನ್ನೂ ಓದಿ: ದೇವಾಸ್ಥಾನದಲ್ಲಿ ಸಿಲಿಂಡರ್​ ಬ್ಲಾಸ್ಟ್​​ : ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಚಿಂತಾಜನಕ !

ಗೋಳಗುಮ್ಮಟ್ಟಕ್ಕೆ ದೀಪಾಲಂಕಾರ !

400 ವರ್ಷಗಳ ಐತಿಹಾಸಿಕ ಗೋಲಗುಮ್ಮಟಕ್ಕೆ ರಿನಿವೆಬಲ್ ಎನರ್ಜಿ ಸಿ.ಎಸ್​.ಅರ್ ಅನುದಾನದಡಿ ದೀಪಾಲಂಕಾರ ವ್ಯವಸ್ಥೆಗೆ ಇಂದು ಚಾಲನೆ ನೀಡಲಾಗಿದೆ. ವಿಜಯಪುರ ನಗರ-ಜಿಲ್ಲೆಯ ಆಕರ್ಷಣೀಯ ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದ್ದು, ಪ್ರವಾಸೋದ್ಯಮದಿಂದ ಜಿಲ್ಲೆಯ ವ್ಯಾಪಾರ-ವಹಿವಾಟಿಗೆ ಉತ್ತೇಜನ ದೊರತು, ಉದ್ಯೋಗ ಸೃಷ್ಟಿಯೊಂದಿಗೆ ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ 2025 ನೇ ಸಾಲಿನ ಪ್ರವಾಸೋದ್ಯಮ ಇಲಾಖೆ ಹೊರತಂದಿರುವ ದಿನದರ್ಶಿಕೆಯನ್ನು ಈ ಸಂದರ್ಭ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಪಾಲಿಕೆಯ ಮೇಯರ್ ಮಹೇಜಬಿನ ಹೋರ್ತಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ಸೇರಿದಂತೆ ಹಲವು ಜನ ಅಧಿಕಾರಿಗಳು ಉಪಸ್ಥಿತರಿದ್ದರು…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments