Site icon PowerTV

1500 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್​ : 3 ಸಾವು, 24 ಜನರಿಗೆ ಗಂಭೀರ ಗಾಯ !

ಉತ್ತರಾಖಂಡ: ಉತ್ತರಾಖಂಡದ ಭೀಮತಾಲ್‌ನಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್‌ 1500 ಅಡಿ ಆಳದ ಕಮರಿಗೆ ಉರುಳಿ ಬಿದ್ದ ಪರಿಣಾಮ ಮೂವರು ಸಾವಿಗೀಡಾಗಿದ್ದು, 24 ಮಂದಿ ಗಾಯಗೊಂಡಿದ್ದಾರೆ.

ಉತ್ತರಖಂಡ್​​ನ ನೈನಿತಾಲ್ ಜಿಲ್ಲೆಯ ಭೀಮತಾಲ್‌ನ ಅಮ್ದಾಲಿ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಪರಿಹಾರ ಕಾರ್ಯಾಚರಣೆ ನಡೆಸುತ್ತಿವೆ. ನೈನಿತಾಲ್‌ನಿಂದ ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಕಂದಕಕ್ಕೆ ಸೇನಾ ವಾಹನ ಉರುಳಿ ದುರಂತ : ಉಡುಪಿಯ ಸೈನಿಕ ಅನೂಪ್​ ಪೂಜಾರಿ ಮನೆಯಲ್ಲಿ ಶೋಕ !
ಗಾಯಾಳುಗಳನ್ನು ಚಿಕಿತ್ಸೆಗಾಗಿ ಹಲ್ದ್ವಾನಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
Exit mobile version