Site icon PowerTV

ಮನಮೋಹನ ಸಿಂಗ್​ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ !

ನವದೆಹಲಿ: ಭಾರತದ ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ನಿಧನಕ್ಕೆ ದೇಶದ ಗಣ್ಯಾತಿಗಣ್ಯರು ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ.

ಇಂದು ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಸುವ ಬಗ್ಗೆ ಕೇಂದ್ರ ಗೃಹ ಇಲಾಖೆಯು ರಕ್ಷಣಾ ಇಲಾಖೆಗೆ ಪತ್ರ ಬರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದೆ.
ಇಂದು ಬೆಳಿಗ್ಗೆ 11:45ರ ವೇಳೆಗೆ ಸಕಲ ಸೇನಾ ಗೌರವಗಳೊಂದಿಗೆ ಮನಮೋಹನ್​ ಸಿಂಗ್​ ಅವರ ಅಂತ್ಯಕ್ರಿಯೆ ನಡೆಯಲಿದ್ದು. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
Exit mobile version