Site icon PowerTV

ಸಚಿನ್​​ ಪಾಂಚಾಳ್​ ಆತ್ಮಹತ್ಯೆ ಪ್ರಕರಣ : ಬೃಹತ್​ ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಿ.ವೈ ವಿಜಯೇಂದ್ರ !

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡದೇ ಇದ್ದರೆ ಜನವರಿ 4 ರಂದು ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು  ಸಿಬಿಐ ತನಿಖೆಗೆ ಆದೇಶಿಸಿದರೆ ಒಳ್ಳೆಯದು. ಜನವರಿ 3 ರವರೆಗೂ ಕಾಯುತ್ತೇವೆ. ಸಿಬಿಐಗೆ ನೀಡದೇ ಇದ್ದರೆ ಜ.4 ರಂದು ಬೃಹತ್‌ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಆರೋಪಿ ರಾಜು ಕಪನೂರು ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಜತೆಗೂ ಇರುವ ಫೋಟೋ ರಿಲೀಸ್ ಮಾಡಿ, ಈತ ಖರ್ಗೆ ಕುಟುಂಬಕ್ಕೆ ಪರಮಾಪ್ತ. ರಾಜೂನ ಸಿಎಂ, ಡಿಸಿಎಂ ತೊಡೆ ಮೇಲೆ ಕೂರಿಸಿಕೊಳ್ಳುವುದು ಬಾಕಿ. ಬಿಟ್ಟರೆ ತಲೆ ಮೇಲೂ ಕೂರಿಸಿಕೊಳ್ತಾರೆ. ಪ್ರಿಯಾಂಕ್ ಖರ್ಗೆ ತಮಗೆ ರಾಜು ಕಪನೂರು ಪರಿಚಯ ಇಲ್ಲ ಅಂತ ಹೇಳಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ  : ಜಮೀನು ವಿವಾದ : 6 ಎಕರೆ ಕಬ್ಬಿನ ಫಸಲಿಗೆ ಬೆಂಕಿ ಇಟ್ಟು ವಿಕೃತಿ ಮೆರೆದ ಮಹಿಳೆ !

ನಮ್ಮ ಕಲಬುರಗಿ ನಾಯಕರ ಕೊಲೆ ಬಗ್ಗೆ ಸಚಿನ್ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಆಂದೋಲನ ಸ್ವಾಮೀಜಿ ಕೊಲೆ ಬಗ್ಗೆಯೂ ಪ್ರಸ್ತಾಪವಾಗಿದೆ. ಕೊಲ್ಹಾಪುರದ ಸುಪಾರಿ ಕಿಲ್ಲರ್‌ಗಳಿಗೆ ಸುಪಾರಿ ಕೊಡಲಾಗಿದೆ ಅಂತ ಇದೆ. ಹೀಗಾಗಿ ಎಲ್ಲ ಅಂಶಗಳ ಬಗ್ಗೆಯೂ ಪಾರದರ್ಶಕ ತನಿಖೆಗೆ ಸಿಬಿಐ ತನಿಖೆ ನಡೆಯಬೇಕು. ನಮ್ಮ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಎಂದರು.

ಮುಂದುವರಿದು ಮಾತನಾಡಿದ ಬಿ.ವೈ ವಿಜಯೇಂದ್ರ ‘ಪ್ರಿಯಾಂಕ್ ಖರ್ಗೆ ಇಲಾಖೆ ಕೇವಲ ಗ್ರಾಮೀಣಾಭಿವೃದ್ಧಿ, ಐಟಿಬಿಟಿ ಅಷ್ಟೇ ಅಲ್ಲ ಪ್ರಿಯಾಂಕ್ ಖರ್ಗೆ ಸರ್ವ ಇಲಾಖೆಗೂ ಮಂತ್ರಿ. ಸದನದಲ್ಲಿ ಎಲ್ಲಾ ಇಲಾಖೆಗಳ ಪ್ರಶ್ನೆಗೂ ಎದ್ದು ಎದ್ದು ಉತ್ತರ ಕೊಡ್ತಾರೆ. ಅವರು ಬಹಳ ದೊಡ್ಡ ಜ್ಞಾನಿ, ಪ್ರಭಾವಿ.  ಬಿಜೆಪಿಯವರಿಗೆ ಆರೋಪ ಮಾಡುವ ಚಟ ಅಂತ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಪೋಕ್ಸೋ ಕೇಸ್ ನಿಂದ ಡೈವರ್ಟ್ ಮಾಡಲು ಆರೋಪ ಮಾಡ್ತಿದ್ದಾರೆ ಅಂದಿದ್ದಾರೆ. ನೀವೇನು ಹೈಕೋರ್ಟಾ? ಸುಪ್ರೀಂಕೋರ್ಟಾ? ಯಡಿಯೂರಪ್ಪ ಬಗ್ಗೆ ನೀವೇನು ಮಾತಾಡೋದು? ನಿಮ್ಮ ಆಪ್ತನ ಕುಮ್ಮಕ್ಕಿನಿಂದಲೇ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

Exit mobile version