ಹಾಸನ : ಪತ್ನಿ ನಂದಿನಿಯ ಕಿರುಕುಳ ಸಹಿಸದೆ ಸಾಫ್ಟ್ವೇರ್ ಇಂಜಿನಿಯರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು. ಮೃತ ಪತಿಯ ಮುಖ ನೋಡಲು ಬಂದ ಮಹಿಳೆಗೆ ಮೃತ ವ್ಯಕ್ತಿಯ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮೋದ್ ಕೌಟುಂಬಿಕ ಕಲಹಕ್ಕೆ ಬೇಸತ್ತು ಹೇಮಾವತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದನು. ಮೃತನ ದೇಹವನ್ನು ನೀರಿನಿಂದ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದರು.
ಇದನ್ನೂ ಓದಿ : ಸ್ವಂತ ತಾಯಿ, ನಾಲ್ವರು ಸಹೋದರಿಯರನ್ನು ಕೊ*ಲೆ ಮಾಡಿ, ವಿಡಿಯೋ ಮಾಡಿದ ದುರುಳ !
ಇಂದು ಗಂಡನ ಶವ ನೋಡಲು ಪ್ರಮೋದ್ನ ಪತ್ನಿ ನಂದಿನಿ ಮತ್ತು ಆಕೆಯ ಕುಟುಂಬಸ್ಥರು ಜಿಲ್ಲಾಸ್ಪತ್ರೆಯ ಶವಗಾರದ ಬಳಿಗೆ ಬಂದಿದ್ದು. ಈ ವೇಳೆ ಆಕ್ರೋಶಗೊಂಡ ಪ್ರಮೋದ್ ಕುಟುಂಬಸ್ಥರು ಮೃತನ ಪತ್ನಿಯನ್ನು ಮತ್ತು ಆಕೆಯ ತಾಯಿಯನ್ನು ಹೊಡೆಯಲು ಅಟ್ಟಾಡಿಸಿದ್ದಾರೆ. ಈ ವೇಳೆ ಎರಡು ಕುಟುಂಬಗಳ ನಡುವೆ ವಾಗ್ವಾದವಾಗಿದೆ ಎಂದು ಮಾಹಿತಿ ದೊರೆತಿದೆ.
ಪ್ರಮೋದ್ ಕುಟುಂಬಸ್ಥರು ಮಹಿಳೆಯನ್ನು ಮತ್ತು ಆಕೆಯ ತಾಯಿಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಮಹಿಳೆಯರನ್ನು ರಕ್ಷಿಸಿ ಕರೆದೊಯ್ದಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಆಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


