ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ತೇಜಸ್ವಿ ಸೂರ್ಯ : ಯಾರಿದು ಶಿವಶ್ರೀ ಸ್ಕಂದಪ್ರಸಾದ್​ !

ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹೌದು.. ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜೊತೆ ಮುಂದಿನ ವರ್ಷ ಮಾರ್ಚ್​ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ ಎಂದ ಸುದ್ದಿಗಳು ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಇನ್ನು ಅಧಿಕೃತ ಘೋಷಣೆಗಳು ಬಾಕಿಇವೆ.

ಬಿಜೆಪಿಯಲ್ಲಿ “ಯಂಗ್​ ಆ್ಯಂಡ್​ ಹ್ಯಾಂಡ್ಸಮ್​” ಎಂದು ಕರೆಸಿಕೊಳ್ಳುವ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ 2 ಭಾರಿ ಚುನಾಯಿತರಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವಮೋರ್ಚ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ತೇಜಸ್ವಿ. ಉತ್ತಮ ವಾಗ್ಮಿ ಎಂಬ ಗರಿಮೆಗು ಪಾತ್ರರಾಗಿದ್ದಾರೆ. ಇದಷ್ಟೆ ಅಲ್ಲದೆ ಜನಪ್ರಿಯ ರಾಜಕಾರಣಿಯಾಗಿರುವ ತೇಜಸ್ವಿ ಕ್ಷೇತ್ರದ ಜನರ ಪ್ರೀತಿಗೂ ಪಾತ್ರರಾಗಿದ್ದಾರೆ. ಇವೆಲ್ಲದ ನಡುವೆ ವೈಯಕ್ತಿಕ ಜೀವನವನ್ನೆ ಮರೆತಿದ್ದ ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

ಸೂರ್ಯರ ಮದುವೆ ಬಗ್ಗೆ ಹಲವಾರು ಸಂದರ್ಭದಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಇದರ ಬಗ್ಗೆ ಸೂರ್ಯ ಎಲ್ಲಿಯೂ ಬಾಯಿಬಿಟ್ಟಿರಲಿಲ್ಲ. ಆದರೆ ಇದೀಗ ತೇಜಸ್ವಿ ಸೂರ್ಯ ಸದ್ದಿಲ್ಲದೆ ಹಸಮಣೆ ಏರಲು ಸಜ್ಜಾಗಿದ್ದಾರೆ.

ಖ್ಯಾತ ಭರತನಾಟ್ಯ ಕಲಾವಿದೆಯನ್ನು ವರಿಸಲಿದ್ದಾರೆ ತೇಜಸ್ವಿ ಸೂರ್ಯ !

ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನ ಮೂಲದ ಸಿವಶ್ರೀ ಸ್ಕಂದಕುಮಾರ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ ಎಂದು ಮಾಹಿತಿ ದೊರೆತಿವೆ.

ಸಿವಶ್ರೀ ಸ್ಥಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆಯಾಗಿದ್ದಾರೆ. ಜೊತೆಗೆ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ. ಇದರೊಂದಿಗೆ ಸೈಕ್ಲಿಂಗ್, ಟ್ರೆಕ್ಕಿಂಗ್ ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದಾರೆ.

“ಪೂಜಿಸಲೆಂದೆ ಹೂಗಳ ತಂದೆ” ಎಂದು ಮೋದಿಯ ಮೆಚ್ಚುಗೆಗೆ ಪಾತ್ರರಾಗಿದ್ದ ಸಿವಶ್ರೀ !

ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಬರೆದುಕೊಂಡಿದ್ದರು.

 

 

RELATED ARTICLES

Related Articles

TRENDING ARTICLES