ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜಾಮೀನು ಕೋರಿ ಚಿತ್ತಾಗಾಂಗ್ ನ್ಯಾಯಾಲಯಕ್ಕೆ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೋರ್ಟ್ನಲ್ಲಿ ನಡೆದ ವಾದವಿವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶ ಎಂ.ಡಿ ಸೈಫುಲ್ ಇಸ್ಲಾಂ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ ಎಂದು ಮಾಹಿತಿ ದೊರೆತಿದೆ.
ಇದನ್ನೂ ಓದಿ : ‘ಪವರ್ ಟಿವಿ’ ಸಂಪಾದಕರಾದ ಎಂ.ಆರ್ ಸುರೇಶ್ ಸೇರಿ 46 ಮಂದಿಗೆ ಬೆಂಗಳೂರು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿ
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಇದರ ವಿರುದ್ಧ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಹಿಂದೂಗಳ ಪರ ಧ್ವನಿ ಎತ್ತಿದ್ದರು. ಇದರ ಪರಿಣಾಮವಾಗಿ ಕಳೆದ ನವೆಂವರ್ 25ರಂದು ಇವರನ್ನು ಬಾಂಗ್ಲಾ ಪೊಲೀಸರು ಬಂಧಿಸಿದ್ದರು.