Site icon PowerTV

ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಧಾರುಣ ಸಾ*ವು !

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 32 ವರ್ಷದ ಭರತ್​ ಎಂದು ಗುರುತಿಸಲಾಗಿದೆ.

ಮೂಲತಃ ಚಿಕ್ಕಬಳ್ಳಾಪುರದ ಗುಡಿಬಂಡೆ ನಿವಾಸಿಯಾಗಿರುವ ಭರತ್ (32) ಬೆಂಗಳೂರಿನಲ್ಲಿ ಖಾಸಗಿ ಪತ್ರಿಕೆಯಲ್ಲಿ (ಹೊಸದಿಗಂತ) ವಿಶೇಷ ವರದಿಗಾರನಾಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲೇ ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆ ಸ್ವಗ್ರಾಮ ಗುಡಿಬಂಡೆಗೆ ಆಗಮಿಸಿದ್ದ. ಆದರೆ ತಡರಾತ್ರಿ ಬಾಗೇಪಲ್ಲಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಭರತ್​ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ :ತಿರುಪತಿಯ ಲಡ್ಡು ತಯಾರಿಕ ಕೇಂದ್ರದಲ್ಲಿ ಅಗ್ನಿ ಅವಘಡ : ಸ್ವಲ್ಪದರಲ್ಲೆ ತಪ್ಪಿತು ಭಾರಿ ದುರಂತ !

ಮಾಚಹಳ್ಳಿ ಕೆರೆಯ ಏರಿಯ ಮೇಲೆ ಇದ್ದ ದೇವರ ಕಲ್ಲಿನ ಗುಡಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ದೇವರ ಗುಡಿಯ ಮೇಲಿನ ಚಪ್ಪಡಿ ಕಲ್ಲು ಕಾರಿನೊಳಗೆ ತೂರಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಭರತ್ ಸಾವನ್ನಪ್ಪಿದ್ದಾನೆ. ಘಟನೆ ಕುರಿತು ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳುಇದಯ ಬಂದಿದೆ.

Exit mobile version