Site icon PowerTV

ತಿರುಪತಿಯ ಲಡ್ಡು ತಯಾರಿಕ ಕೇಂದ್ರದಲ್ಲಿ ಅಗ್ನಿ ಅವಘಡ : ಸ್ವಲ್ಪದರಲ್ಲೆ ತಪ್ಪಿತು ಭಾರಿ ದುರಂತ !

ಅಮರಾವತಿ : ತಿರುಪತಿ ತಿರುಮಲದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಲಡ್ಡು ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆದರೆ ತಕ್ಷಣ ಎಚ್ಚೆತ್ತ ಸಿಬ್ಬಂದಿಗಳು ಬೆಂಕಿಯನ್ನು ಕಡಿಮೆ ಇದ್ದಾಗಲೆ ನಂದಿಸಿದ್ದಾರೆ.

ಹೌದು.. ಇತ್ತೀಚೆಗೆ ಕಾಲ್ತುಳಿತದಿಂದ ಭಾರಿ ಸದ್ದು ಮಾಡಿದ್ದ ತಿರುಪತಿಯಲ್ಲಿ ಇದೀಗ ಮತ್ತೊಂದು ಅವಗಡ ಸಂಭವಿಸಿದ್ದು. ದೇವಾಲಯದ 47ನೇ ಲಡ್ಡು ಕೌಂಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ದೇವಾಲಯದ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ : ಭೀಕರ ರಸ್ತೆ ಅಪಘಾತ : 6 ಮಂದಿ ಸಾ*ವು, 13ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ !

ಜ. 8ರಂದು ತಿರುಪತಿಯಲ್ಲಿ ಸಾವಿರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಇದರಿಂದ ಸುಮಾರು 6 ಜನ ಸಾವನ್ನಪ್ಪಿದ್ದರು. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿತ್ತು. ಇದಾದ ಕೆಲವೇ ದಿನಗಳ ಅಂತರದಲ್ಲಿ ಅಗ್ನಿಅವಘಡ ಸಂಭವಿಸಿದೆ.

Exit mobile version