Site icon PowerTV

ಕರುಳಿನ ಕುಡಿಗಳನ್ನೆ ಕಾಲುವೆಗೆ ಎಸೆದ ತಾಯಿ : 4 ಮಕ್ಕಳು ಸಾ*ವು !

ವಿಜಯಪುರ : ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿಯೊಬ್ಬಳು ಮಕ್ಕಳ ಸಮೇತ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿದ್ದು. ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿಯ, ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಈ ಕೃತ್ಯ ಮಾಡಿದ್ದಾಳೆ ಎಂದು ಶಂಕಿಸಲಾಗಿದೆ. ಮಹಿಳೆ ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದಿದ್ದಾಳೆ. ನಂತರ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಸ್ಥಳೀಯರು ತಾಯಿ ಭಾಗ್ಯಾ ಭಜಂತ್ರೀಯನ್ನು ರಕ್ಷಿಸಿದ್ದಾರೆ. ಆದರೆ ದುರಾದೃಷ್ಟವಶಾತ್​ 4 ಮಕ್ಕಳು  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಚಾಮರಾಜಪೇಟೆಯಿಂದ ಹಿಂದೂಗಳನ್ನು ಓಡಿಸಲು ಷಡ್ಯಂತ್ರ ನಡೆಸಲಾಗುತ್ತಿದೆ : ಭಾಸ್ಕರ್​ ರಾವ್​

ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ (13 ತಿಂಗಳು) ಎಂದು ಗುರುತಿಸಲಾಗಿದೆ. ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದು. ಸ್ಥಳಕ್ಕೆ ಆಗಮಿಸಿರುವ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ತಾಯಿಯ ಆತುರಕ್ಕೆ ಬದುಕಿ ಬಾಳಬೇಕಿದ್ದ ಮಕ್ಕಳು ಮೃತಪಟ್ಟಿರುವುದು ನಿಜಕ್ಕೂ ಆಘಾತಕಾರಿಯಾದ ವಿಷಯವಾಗಿದೆ.

 

Exit mobile version