Site icon PowerTV

ರಾಜ್ಯ ಸರ್ಕಾರ ಗೋ ಮಾತೆಯ ಶಾಪಕ್ಕೆ ಗುರಿಯಾಗಲಿದೆ : ಕೆ.ಎಸ್​ ಈಶ್ವರಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರ ಗೋ ಹಂತಕರಿಗೆ ಬೆಂಬಲ ನೀಡುತ್ತಿದ್ದು, ಗೋ ಮಾತೆಯ ಶಾಪಕ್ಕೆ ಬಲಿಯಾಗಲಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಡೆದ ಗೋಹತ್ಯೆ ಕೆಚ್ಚಲು ಕೊಯ್ದ ಪ್ರಕರಣ ಇಡೀ ಹಿಂದೂಗಳ ಮನಸ್ಸನ್ನು ನೋಯಿಸಿದೆ. ಮತ್ತು ಆಕ್ರೋಶ ಬರುವಂತೆ ಮಾಡಿದೆ. ಸರ್ಕಾರ ಗೋಮಾತೆಯ ಶಾಪಕ್ಕೆ ಬಲಿಯಾಗಲಿದೆ. ಈ ಘಟನೆ ವಿರೋಧಿಸಿ ನಾಳೆ ರಾಷ್ಟ್ರ ಭಕ್ತರ ಬಳಗದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ನಂತರ ಈ ಘಟನೆಯ ಹಿಂದೆ ಇರುವ ಶಕ್ತಿಗಳನ್ನು ಬಂಧಿಸಬೇಕೆಂದು ಆಗ್ರಹಿಸಲಾಗುವುದು ಎಂದಿದ್ದಾರೆ.

ಈ ಸರ್ಕಾರ ಯಾವ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವುದಿಲ್ಲ ಎಂದು ತಿಳಿಸಿದೆ. ಇದರಿಂದ ಗೋಹಂತಕರಿಗೆ ಕುಮ್ಮಕ್ಕು ಸಿಕ್ಕಂತಾಗಿದೆ. ಗೋ ಕೆಚ್ಚಲು ಕೊಯ್ದ ನಸ್ರು ಎಂಬಾತನನ್ನು ಬಂಧಿಸಲಾಗಿದ್ದರೂ ಕೂಡ ಈತ ಕುಡುಕ, ಹುಚ್ಚ ಎಂದು ಸರ್ಕಾರ ಕಟ್ಟು ಕತೆ ಹೇಳುತ್ತಿದೆ. ಸರ್ಕಾರದ ತಾಳಕ್ಕೆ ಪೊಲೀಸ್ ಇಲಾಖೆ ತಲೆ ಬಾಗಿದೆ. ಇದರ ಹಿಂದೆ ಯಾರಿದ್ದಾರೆ. ಆತನೊಬ್ಬನೇ ಹೇಗೆ ಈ ಕೃತ್ಯ ಮಾಡಲು ಸಾಧ್ಯ? ಮುಂಜಾನೆ ನಾಲ್ಕೂವರೆಗೆ ಕುಡಿದಿದ್ದ ಎಂದು ಹೇಳುತ್ತಾರೆ. ಅಷ್ಟು ಹೊತ್ತಿನಲ್ಲಿ ಯಾವ ಬಾರ್ ಗಳು ತೆರೆದಿದವು. ಸರ್ಕಾರ ಏನೋ ಹೇಳಬೇಕೆಂದು ಹೇಳುತ್ತಿದೆ ಎಂದು ಕೆಂಡ ಕಾರಿದ್ದಾರೆ.

ಇದನ್ನೂ ಓದಿ : ಮತ್ತೊಂದು ಪೈಶಾಚಿಕ ಕೃತ್ಯ : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ !

ಇದೇವೇಳೆ, ಭಗವಾನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಆತನೊಬ್ಬ ಅಯೋಗ್ಯ. ಇಂತಹವರು ಇರುವುದೇ ನಾಲಾಯಕ್. ನನಗೆ ಇನ್ನು ಕೆಟ್ಟ ಪದ ಬಾಯಲ್ಲಿ ಬರುತ್ತಿದೆ. ಅವನು ಆ ಮಗ ಎಂದು ಹೇಳಬಹುದು. ಆದರೆ, ನಾನು ಹಾಗೆ ಹೆಳುವುದಿಲ್ಲ. ಈತ ಅಯೋಗ್ಯ ಎಂಬುದು ಈತನ ಅಪ್ಪ, ಅಮ್ಮನಿಗೂ ಗೊತ್ತಿರಲಿಲ್ಲ ಎನಿಸುತ್ತದೆ ಎಂದು ಈಶ್ವರಪ್ಪ ಕೆಂಡ ಕಾರಿದ್ದಾರೆ.

Exit mobile version