Friday, September 12, 2025
HomeUncategorizedಹಿರಿಯ ನಟ ಸರಿಗಮ ವಿಜಿ​ ನಿಧನ !

ಹಿರಿಯ ನಟ ಸರಿಗಮ ವಿಜಿ​ ನಿಧನ !

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ನಿಧನರಾಗಿದ್ದಾರೆ ಎಂದು ಮಾಹಿತಿ ದೊರೆತಿದ್ದು. ಕಳೆದ ಏಳೆಂಟು ದಿನಗಳಿಂದ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಿಗಮ ವಿಜಯ್​ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.

ಇದನ್ನೂ ಓದಿ : ಲಕ್ಷ್ಮೀ ಹೆಬ್ಬಾಳ್ಕರ್​ ಕಾರು ಅಪಘಾತ ಪ್ರಕರಣ : ಹಿಟ್​ ಆ್ಯಂಡ್​ ರನ್​​ ಕೇಸ್​ ದಾಖಲಿಸಿದ ಕಾರು ಚಾಲಕ !

ಸುಮಾರು 50 ವರ್ಷಕ್ಕೂ ಹೆಚ್ಚು ಕಾಲ ಕಲಾಸೇವೆ ಮಾಡಿದ್ದ ಇವರು, ರಾಜ್ಯ ಪ್ರಶಸ್ತಿಗೂ ಪಾತ್ರರಾಗಿದ್ದರು. ಆದರೆ ಇಂದು ಅವರಿ ನಿಧನರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments