Monday, August 25, 2025
Google search engine
HomeUncategorizedದೆಹಲಿ ಚುನಾವಣೆಗೆ ಬಿಜೆಪಿಯಿಂದ ಭರ್ಜರಿ ಗ್ಯಾರಂಟಿಗಳ ಘೋಷಣೆ : ಮಹಿಳೆಯರಿಗೆ 2,500ರೂ ಹಣ !

ದೆಹಲಿ ಚುನಾವಣೆಗೆ ಬಿಜೆಪಿಯಿಂದ ಭರ್ಜರಿ ಗ್ಯಾರಂಟಿಗಳ ಘೋಷಣೆ : ಮಹಿಳೆಯರಿಗೆ 2,500ರೂ ಹಣ !

ನವದೆಹಲಿ: ಇನ್ನೇನು ಕೆಲವೆ ದಿನಗಳಲ್ಲಿ ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಎಲ್ಲಾ ರಾಜಕೀಯ ಪಕ್ಷಗಳು ಜನರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಇದರ ಹಿನ್ನಲ್ಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿಯ ಪ್ರಣಾಳಿಕೆಯನ್ನು ಘೋಷಣೆ ಮಾಡಿದ್ದಾರೆ.

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು. ಇದರಲ್ಲಿ ಅನೇಕ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಆಡಾಳಿತಾರೂಡ ಆಮ್​ ಆದ್ಮಿ ಸರ್ಕಾರದ ಮೇಲೆ ಅನೇಕ ಭ್ರಷ್ಟಚಾರದ ಆರೋಪಗಳನ್ನು ಹೊರಿಸಲಾಗಿದೆ.

ಬಿಜೆಪಿಯ ಸಂಕಲ್ಪ ಪತ್ರದಲ್ಲಿ ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್‌ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು ಎಂದು ಘೋಷಿಸಿದ್ದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ : ಪ್ರೇಯಸಿಯನ್ನು ದೂರ ಮಾಡಿದ ಪೊಲೀಸರು : ಮನನೊಂದ ಯುವಕ ಆತ್ಮಹ*ತ್ಯೆ !

ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಆಯುಷ್​​ಮಾನ್​ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು. 500 ರೂಪಾಯಿಗೆ ಸಿಲಿಂಡರ್​ ಸೇರಿದಂತೆ, ದೀಪಾವಳಿ ಮತ್ತು ಹೋಳಿ ಹಬ್ಬಕ್ಕೆ ಒಂದೊಂದು ಸಿಲಿಂಡರ್​ಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಬಿಜೆಪಿ ತನ್ನ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿದೆ. ಇವರ ಜೊತೆಗೆ ಆಮ್​ ಆದ್ಮಿ ಕೂಡ ಭರ್ಜರಿ ಗ್ಯಾರಂಟಿಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿದೆ.

ಇನ್ನು ಫೆಬ್ರವರಿ 5ರಂದು ರಾಷ್ಟ್ರ ರಾಜಧಾನಿಗೆ ಚುನಾವಣೆ ನಡೆಯಲಿದ್ದು. ಮತದಾರ ಯಾರ ಕೈ ಹಿಡಿಯುತ್ತಾನೆ ಎಂದು ಕುತೂಹಲ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments