Site icon PowerTV

ಕೋವಿಡ್​ ನಿರ್ವಹಣೆಯಲ್ಲಿ ವಿಫಲ : WHO ದಿಂದ ಹೊರ ಬಂದ ಅಮೇರಿಕಾ !

ನ್ಯೂಯಾರ್ಕ್​ : ವಿಶ್ವದ ದೊಡ್ಡಣ್ಣ ಅಮೇರಿಕಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದಿದ್ದು. ಈ ಕುರಿತು ನೂತನ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಘೋಷಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಸೇರಿ ಇತರ ಅಂತರರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳ ನಿರ್ವಹಣೆಯಲ್ಲಿ ಡಬ್ಲ್ಯುಎಚ್‌ಒ ವಿಫಲವಾಗಿದೆ ಎಂದ ಟ್ರಂಪ್, ಅಮೆರಿಕವು ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ನಿರ್ಗಮಿಸುತ್ತದೆ ಎಂದು ಹೇಳಿದ್ದಾರೆ.

WHO ನಮ್ಮನ್ನು ಅಳಿಸಿ ಹಾಕಲು ನೋಡಿತು, ಎಲ್ಲರೂ ನಮ್ಮನ್ನು ತುಳಿಯಲು ನೋಡಿದರು, ಆದರೆ ಅದು ಇನ್ನು ಮುಂದೆ ಇದು ನಡೆಯುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.’ಮುಂದಿನ 12 ತಿಂಗಳಲ್ಲಿ ಅಮೆರಿಕ ಡಬ್ಲ್ಯುಎಚ್‌ ಒನಿಂದ ಹೊರಬರಲಿದೆ. ಜತೆಗೆ ಡಬ್ಲ್ಯುಎಚ್‌ಒಗೆ ನೀಡುತ್ತಿದ್ದ ಹಣಕಾಸಿನ ನೆರವನ್ನು ನಿಲ್ಲಿಸಲಿದೆ. ಸಂಸ್ಥೆಯಿಂದ ಹೊರಬರುವ ಪ್ರಕ್ರಿಯೆ ಜಾರಿಯಲ್ಲಿರುವಾಗ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಒಪ್ಪಂದ ಮಾತುಕತೆಗಳು ನಿಲ್ಲಲಿದೆ. ಅಲ್ಲದೆ ಸಂಸ್ಥೆಯೊಂದಿಗೆ ಕೆಲಸ ಮಾಡುವ ಅಮೆರಿಕದ ಸರ್ಕಾರಿ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳಲಾಗುವುದು, ಸಂಸ್ಥೆಯೊಂದಿಗೆ ಅಗತ್ಯ ಮಾತುಕತೆಗಳನ್ನು ನಡೆಸಲು ಪಾಲುದಾರರನ್ನು ಮರು ನೇಮಕ ಮಾಡಲಾಗುವುದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :

ಟ್ರಂಪ್ ಅವರ ಆದೇಶದ ಕುರಿತು ಡಬ್ಲ್ಯುಎಚ್‌ ಒ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕವು ಡಬ್ಲ್ಯುಎಚ್‌ ಒ ಅತಿದೊಡ್ಡ ಆರ್ಥಿಕ ಬೆಂಬಲವಾಗಿತ್ತು. ಡಬ್ಲ್ಯುಎಚ್‌ ಒನ ಒಟ್ಟು ನಿಧಿಯ ಶೇ 18ರಷ್ಟು ಕೊಡುಗೆಯನ್ನು ಅಮೆರಿಕ ನೀಡುತ್ತಿತ್ತು. ಅಮೆರಿಕದ ಈ ಕ್ರಮವು ಕ್ಷಯ, ಎಚ್‌ಐವಿ ಅಥವಾ ಏಡ್ಸ್ ಸೇರಿ ಇತರ ಆರೋಗ್ಯ ತುರ್ತುಸ್ಥಿತಿಗಳನ್ನು ನಿರ್ವಹಿಸುವಲ್ಲಿ ಡಬ್ಲ್ಯುಎಚ್‌ಒ ತೊಂದರೆ ಅನುಭವಿಸಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Exit mobile version