Site icon PowerTV

ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾ*ವು : ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ !

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ  ಸುಮಾರು 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ದೊರೆತಿದೆ.

ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಈ ಅಪಘಾತದಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದೆ. ತರಕಾರಿ ತುಂಬಿಕೊಂಡು ಹಾವೇರಿಯ ಸವಣೂರಿನಿಂದ ಅಂಕೋಲದ ಕಡೆಗೆ ತೆರಳುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದೆ.

ಇದನ್ನೂ ಓದಿ : ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಪೊಲೀಸ್​ ಟ್ರೀಟ್​ಮೆಂಟ್​ !

ಮೃತರನ್ನು ಫಯಾಜ್ ಇಮಾಮ್ ಸಾಬ್ ಜಮಖಂಡಿ (45), ವಾಸೀಮ್ ವಿರುಲ್ಲಾ ಮುಡಗೇರಿ (35), ಇಜಾಜ್ ಮುಸ್ತಕಾ ಮುಲ್ಲಾ (20), ಸಾದೀಕ್ ಭಾಷ್ ಫಾರಷ್ (30), ಗುಲಾಮ್ಉಷೇನ್ ಜವಳಿ (40), ಇಮ್ತಿಯಾಜ್ ಮಮಜಾಪರ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25)
ಅಸ್ಲಂ ಬಾಬುಲಿ ಬೆಣ್ಣಿ (24) ಎಂದು ಗುರುತಿಸಲಾಗಿದೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಷ್​ನಲ್ಲಿ ಸಂತಾಪ ಸೂಚಿಸಿದ್ದು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Exit mobile version