Site icon PowerTV

ಲಾರಿ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ : ಓರ್ವ ಸಾ*ವು !

ಕಲಬುರಗಿ: ಲಾರಿ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ಯಾಂಕರ್​ ಚಾಲಕ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು. ಗುರುವಾರ ನಸುಕಿನ ಜಾವ ದುರ್ಘಟನೆ ಘಟಿಸಿದೆ.

ಕಲಬುರಗಿ ತಾಲೂಕಿನ ಗೊಬ್ಬೂರ ಕ್ರಾಸ್ ಬಳಿ ಘಟನೆ ನಡೆದಿದೆ. ಅಫಜಲಪುರದಿಂದ ಕಲಬುರಗಿ ಕಡೆ ಬರುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ 22 ವರ್ಷದ ಅನಿಲ್​ ಮೃತಪಟ್ಟಿದ್ದಾನೆ.

ಇದನ್ನೂ ಓದಿ: KSRTC ಬಸ್​ ಮತ್ತು ಟ್ರ್ಯಾಕ್ಟರ್​ ನಡುವೆ ಭೀಕರ ಅಪಘಾತ : 18 ಜನರಿಗೆ ಗಾಯ !

ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version