Site icon PowerTV

KSRTC ಬಸ್​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ : ಐವರಿಗೆ ಗಂಭೀರ ಗಾಯ !

ಚಾಮರಾಜನಗರ : KSRTC ಬಸ್​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ಚಾಮರಾಜನಗರದ ಹನೂರು ತಾಲೂಕಿನ ಕೌದಳ್ಳಿ‌ ಸಮೀಪದ ಸಂತೆಖಾನೆ ಬಳಿ ಅಪಘಾತ ಸಂಭವಿಸಿದ್ದು.  KSRTC ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ :ಭಾರತ ರತ್ನ ರೇಸ್​ನಲ್ಲಿ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಮತ್ತು ರತನ್​ ಟಾಟ !

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸೇಫ್​ ಆಗಿದ್ದು. ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂ ಆಗಿದ್ದು. ಸ್ಥಳಕ್ಕೆ ರಾಮಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Exit mobile version