Site icon PowerTV

ಮದುವೆ ವಾರ್ಷಿಕೋತ್ಸವದ ದಿನವೇ ಗಂಡು ಮಗುವಿಗೆ ಜನ್ಮ ನೀಡಿದ ಹರಿಪ್ರಿಯಾ !

ಬೆಂಗಳೂರು : ಕನ್ನಡದ ಖ್ಯಾತ ನಟಿ ಹರಿಪ್ರಿಯಾ ನಿನ್ನೆ (ಜ.26)ರಂದು ಗಂಡು ಮಗುವಿಗೆ ಜನ್ಮ ನೀಡಿದ್ದು. ಪೋಷಕರಾಗಿ ಪ್ರಮೋಷನ್  ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವದ ದಿನವೇ ತಮ್ಮ ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ.

ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರಿಪ್ರಿಯ ಗಂಡು ಮಗುವಿಗೆ ಜನ್ಮ ನೀಡಿದ್ದು. ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದು ನಟ ವಸಿಷ್ಟ ಸಿಂಹ ಭಾವುಕರಾಗದ್ದಾರೆ.

ಇದನ್ನೂ ಓದಿ : 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು !

2023ರ ಜನವರಿ 26ರಂದು ಹರಿಪ್ರಿಯ ಮತ್ತು ವಸಿಷ್ಟ ಸಿಂಹ ಮೈಸೂರಿನಲ್ಲಿ ಮದುವೆಯಾಗಿದ್ದರು. ಇದೀಗ ಅದೇ ದಿನದಂದು ಇವರಿಬ್ಬರು ತಮ್ಮ ಚೊಚ್ಚಲ ಮಗುವಿಗೆ ಸ್ವಾಗತ ಕೋರಿದ್ದಾರೆ. ಸಿಂಹಪ್ರಿಯ ಜೋಡಿಗೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ ಎಂದು ತಿಳಿದು ಬಂದಿದೆ.

Exit mobile version