Sunday, August 24, 2025
Google search engine
HomeUncategorizedಕರ್ನಾಟಕದ ಪರ ರಣಜಿಯಲ್ಲಿ ಆಡಲು ಸಜ್ಜಾದ ಕನ್ನಡಿಗ ಕೆಎಲ್ ರಾಹುಲ್‌

ಕರ್ನಾಟಕದ ಪರ ರಣಜಿಯಲ್ಲಿ ಆಡಲು ಸಜ್ಜಾದ ಕನ್ನಡಿಗ ಕೆಎಲ್ ರಾಹುಲ್‌

ಗಾಯದಿಂದ ಚೇತರಿಸಿಕೊಂಡಿರುವ ಭಾರತದ ಅನುಭವಿ ಬ್ಯಾಟರ್‌ ಕೆಎಲ್ ರಾಹುಲ್ ಹರಿಯಾಣ ವಿರುದ್ಧದ ಕೊನೆಯ ಲೀಗ್‌ ಪಂದ್ಯದಲ್ಲಿ ಕರ್ನಾಟಕದ ಪರ ಆಡಲು ಸಜ್ಜಾಗಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 30ರಂದು ಪಂದ್ಯ ಆರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಎಲ್ಲ ಐದು ಟೆಸ್ಟ್‌ಗಳಲ್ಲಿ ಆಡಿದ್ದ ವಿಕೆಟ್‌ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಅವರ ಮೊಣಕೈಗೆ ಗಾಯವಾಗಿತ್ತು. ರಾಹುಲ್ ಅವರಿಗೆ ಬಿಸಿಸಿಐ ವೈದ್ಯಕೀಯ ತಂಡವು ಚಿಕಿತ್ಸೆ ನೀಡಿದೆ. ಗಾಯದಿಂದಾಗಿ ರಾಹುಲ್ ಅವರನ್ನು ಜನವರಿ 23ರಿಂದ ಆರಂಭವಾಗಿದ್ದ ಪಂಜಾಬ್‌ ವಿರುದ್ಧದ ಎಲೈಟ್‌ ‘ಸಿ’ ಗುಂಪಿನ ಪಂದ್ಯದಿಂದ ಹೊರಗಿಡಲಾಗಿತ್ತು.

2020ರಲ್ಲಿ ಕೋಲ್ಕತ್ತಾದಲ್ಲಿ ಬಂಗಾಳ ವಿರುದ್ಧ ಕಾಣಿಸಿಕೊಂಡ ನಂತರ ರಾಹುಲ್ ಅವರು ಕಾಣಿಸಿಕೊಳ್ಳುತ್ತಿರುವ ಮೊದಲ ರಣಜಿ ಟ್ರೋಫಿ ಪಂದ್ಯ ಇದಾಗಿದ್ದು, ಕೊನೆಯ ಲೀಗ್ ಪಂದ್ಯದಲ್ಲಿ ಕರ್ನಾಟಕದ ಪರವಾಗಿ ಆಡಲಿದ್ದಾರೆ ಮಂಗಳವಾರದಿಂದ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡದೊಂದಿಗೆ ರಾಹುಲ್ ಅಭ್ಯಾಸ ಆರಂಭಿಸುವ ನಿರೀಕ್ಷೆಯಿದೆ. ಗಾಯದ ಕಾರಣದಿಂದಾಗಿ ರಣಜಿ ಪಂದ್ಯದಿಂದ ಹೊರಗುಳಿದಿದ್ದ ವಿದ್ವತ್ ಕಾವೇರಪ್ಪ ಇದೀಗ ತಂಡಕ್ಕೆ ಮರಳುತ್ತಿದ್ದು, ಕರ್ನಾಟಕ ತಂಡವು ತಮ್ಮ ವೇಗದ ಬೌಲಿಂಗ್ ವಿಭಾಗದಲ್ಲಿ ಬಲ ಸಾಧಿಸಿದೆ.

ಇದನ್ನೂ ಓದಿ : ಜಸ್ಪ್ರೀತ್ ಬುಮ್ರಾ ಮುಡಿಗೆ ICC 2024ರ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ

ಕರ್ನಾಟಕವು ಸಿ ಗುಂಪಿನಲ್ಲಿ 19 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹರಿಯಾಣ 26 ಅಂಕಗಳೊಂದಿಗೆ ಮೊದಲ ಸ್ಥಾನ ಮತ್ತು ಕೇರಳ 21 ಅಂಕಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ನಾಕೌಟ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಕರ್ನಾಟಕವು ಬೋನಸ್ ಅಂಕದೊಂದಿಗೆ ಈ ಪಂದ್ಯವನ್ನು ಗೆಲ್ಲಲೇ ಬೇಕಿರುವ ಅನಿವಾರ್ಯತೆಗೆ ಸಿಲುಕಿದೆ.

ರಣಜಿ ಪಂದ್ಯಕ್ಕೆ ಕರ್ನಾಟಕ ತಂಡ !

ಮಯಾಂಕ್ ಅಗರ್ವಾಲ್ (ನಾಯಕ), ಕೆಎಲ್ ರಾಹುಲ್, ಶ್ರೇಯಸ್ ಗೋಪಾಲ್ (ಉಪನಾಯಕ), ದೇವದತ್ ಪಡಿಕ್ಕಲ್, ಕೆವಿ ಅನೀಶ್, ಆರ್ ಸ್ಮರಣ್, ಕೆಎಲ್ ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಪ್ರಸಿದ್ಧ್ ಕೃಷ್ಣ, ವಿದ್ವತ್ ಕಾವೇರಪ್ಪ, ವಾಸುಕಿ ಕೌಶಿಕ್, ಅಭಿಲಾಷ್ ಶೆಟ್ಟಿ, ಯಶೋವರ್ಧನ್ ಪರಂತಪ್, ನಿಕಿನ್ ಜೋಸ್, ಸುಜಯ್ ಸಾತೇರಿ (ವಿಕೆಟ್ ಕೀಪರ್), ಮೊಹ್ಸಿನ್ ಖಾನ್.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments