ತುಮಕೂರು : ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಕಾರ್ಯಕ್ರಮದ ಮೂಲಕ ನಾಡಿಗೆ ಪರಿಚಯವಾಗಿದ್ದ ಮಂಜಮ್ಮ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇವರು 2018ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದ ಮಂಜಮ್ಮ ಮತ್ತು ರತ್ಮಮ್ಮ ಕರ್ನಾಟಕದ ಜನಮನ ಗೆಲ್ಲುವಲ್ಲಿ ಸಫಲರಾಗಿದ್ದರು. ತುಮಕೂರಿನ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಇವರು ದಂಡಿ ಮಾರಮ್ಮ ದೇವಾಲಯದ ಬಳಿಯಲ್ಲಿ ಹಾಡು ಹಾಡುತ್ತಾ ಭಿಕ್ಷೆ ಬೇಡುತ್ತ ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ: ಮದ್ವೆಯಾಗಿ 12 ವರ್ಷದ ನಂತರ ಮೊದಲ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾ*ವು !
ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.


