Site icon PowerTV

ಪಾದಾಚಾರಿಗೆ ಅಪರಿಚಿತ ವಾಹನ ಡಿಕ್ಕಿ : ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ದೇಹ !

ಹಾಸನ : ಪಾದಾಚಾರಿಯೋರ್ವನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ವ್ಯಕ್ತಿಯ ದೇಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.

ಹಾಸನ ಜಿಲ್ಲೆ, ಸಕಲೇಶಪುರ ಹೊರವಲಯದ ಬೈಪಾಸ್‌ನಲ್ಲಿ ಘಟನೆ ನಡೆದಿದ್ದು. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೌಡಳ್ಳಿ ಗ್ರಾಮದ 46 ವರ್ಷದ ಮಂಜುನಾಥ್​ (ಗುಂಡ) ಎಂಬಾತನಿಗೆ ಅಪರಿಚಿತ್ ವಾಹನ ಡಿಕ್ಕಿಯಾಗಿದೆ.

ಇದನ್ನೂ ಓದಿ :ಜಾನುವಾರುಗಳನ್ನು ಕದಿಯಲು ಬಂದ ಕಳ್ಳರು : ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು !

ಡಿಕ್ಕಿಯ ರಭಸಕ್ಕೆ ಮಂಜುನಾಥ್​ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು. ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನಾ ಸ್ಥಳಕ್ಕೆ ಸಕಲೇಶಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Exit mobile version