Site icon PowerTV

ಕುಂಭಮೇಳದಲ್ಲಿ ಕಾಲ್ತುಳಿತ : ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್​ಗೆ ಬೆಂಕಿ !

ಪ್ರಯಾಗ್​ರಾಜ್​ : ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಾಲ್ತುಳಿತ ಸಂಭವಿಸಿದ್ದು. ಹತ್ತಾರು ಭಕ್ತರು ಸಾವನ್ನಪ್ಪಿದ್ದು. 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಗಾಯಗೊಂಡವರನ್ನು ಕರೆದೊಯ್ಯುವಾಗ ಆಂಬ್ಯುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವರದಿಯಾಗಿದೆ. ಆ್ಯಂಬುಲೆನ್ಸ್​ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗಾಯಾಳುಗಳನ್ನು ಕೆಳಗೆ ಇಳಿಸಿದ್ದು. ಯಾವುದೇ ದುರ್ಘಟನೆ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಉಡುದಾರದಿಂದ ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಸಾ*ವು : ನೋಡುತ್ತ ನಿಂತ ತಂಗಿ !

ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ಪ್ರಧಾನಿ ಮೋದಿ !

ಪ್ರಧಾನಿ ಮೋದಿಯವರು ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಬಹಳ ಜಾಗರೂಕರಾಗಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅದೇ ಸಮಯದಲ್ಲಿ, ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಅಮಿತ್ ಶಾ ಅವರು ಮುಖ್ಯಮಂತ್ರಿಯಿಂದ ದೂರವಾಣಿ ಮೂಲಕ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಕ್ತರು ಸಂಗಮದ ಮಧ್ಯ ಭಾಗಕ್ಕೆ ತೆರಳಬೇಡಿ, ಹತ್ತಿರದ ಘಾಟ್​ನಲ್ಲಿ ಸ್ನಾನಮಾಡಿ ಎಂದು ಮನವಿ ಮಾಡಿದ್ದಾರೆ. ಆಡಳಿತ ನೀಡುವ ಸೂಚನೆಗಳನ್ನು ಪಾಲಿಸಿ ಆಡಳಿತಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.

Exit mobile version