Site icon PowerTV

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : ಘಟನೆಗೆ ಯೋಗಿ ಸರ್ಕಾರವೇ ಹೊಣೆ ಎಂದ ಖರ್ಗೆ !

ಉತ್ತರಪ್ರದೇಶ : ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಮಹಾಕುಂಭಮೇಳವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವೈಫಲ್ಯ ಕಂಡಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಇದನ್ನೂ ಓದಿ : ಉಡುದಾರದಿಂದ ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಸಾ*ವು : ನೋಡುತ್ತ ನಿಂತ ತಂಗಿ !

ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪ್ರವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ನಲ್ಲಿ ಜಮಾಯಿಸಿದ್ದಾರೆ. ಈ ನಡುವೆ ಉಂಟಾದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಹಾಗೂ ಅನೇಕ ಮಂದಿ ಗಾಯಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸಾವು-ನೋವಿನ ಬಗ್ಗೆ ಅಧಿಕೃತ ವರದಿ ಇನ್ನಷ್ಟೇ ಬರಬೇಕಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ‘ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಅನೇಕ ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.

Exit mobile version