Monday, August 25, 2025
Google search engine
HomeUncategorizedಬಿಜೆಪಿ ಸರ್ಕಾರದ ದುರಾಡಳಿತದಿಂದ ಕಾಲ್ತುಳಿತ ಉಂಟಾಗಿದೆ: ರಾಹುಲ್​ ಗಾಂಧಿ

ಬಿಜೆಪಿ ಸರ್ಕಾರದ ದುರಾಡಳಿತದಿಂದ ಕಾಲ್ತುಳಿತ ಉಂಟಾಗಿದೆ: ರಾಹುಲ್​ ಗಾಂಧಿ

ಉತ್ತರಪ್ರದೇಶ್​ : ಪ್ರಯಾಗ್​ರಾಜ್​ನ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ ಅನೇಕ ರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದು. ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮೃತರಿಗೆ ಸಂತಾಪ ಸೂಚಿಸಿದ್ದು. ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಏನಿದೆ ರಾಹುಲ್​ ಟ್ವಿಟ್​ನಲ್ಲಿ !

ಪ್ರಯಾಗ್ರಾಜ್ ಮಹಾಕುಂಭದಲ್ಲಿ ಕಾಲ್ತುಳಿತದಿಂದಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ಇದನ್ನೂ ಓದಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು !

ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಉತ್ತರಪ್ರದೇಶದ ಆಡಳಿತ ಸಾಮಾನ್ಯ ಭಕ್ತರ ಬದಲಿಗೆ ವಿಐಪಿಗಳ ಸಂಚಾರಕ್ಕೆ ಯುಪಿ ಸರ್ಕಾರ ವಿಶೇಷ ಗಮನ ಕೊಟ್ಟ ಕಾರಣಕ್ಕೆ ಈ ದುರಂತ ಸಂಭವಿಸಿದೆ. ಮಹಾಕುಂಭಕ್ಕೆ ಇನ್ನೂ ಸಾಕಷ್ಟು ಸಮಯವಿದೆ, ಇನ್ನೂ ಹಲವು ಮಹಾಸ್ನಾನಗಳು ನಡೆಯಬೇಕಿದೆ. ಇಂದಿನಂತಹ ದುರಂತ ಘಟನೆ ಮರುಕಳಿಸದಂತೆ ಸರಕಾರ ವ್ಯವಸ್ಥೆ ಸುಧಾರಿಸಬೇಕು.

ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕಬೇಕು ಮತ್ತು ಸಾಮಾನ್ಯ ಭಕ್ತರ ಅಗತ್ಯತೆಗಳನ್ನು ಪೂರೈಸಲು ಸರ್ಕಾರ ಉತ್ತಮ ವ್ಯವಸ್ಥೆ ಮಾಡಬೇಕು. ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ವಿನಂತಿಸುತ್ತೇನೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments