Site icon PowerTV

ಅಂಜನಾದ್ರಿ ಬೆಟ್ಟ ಹತ್ತುವ ವೇಳೆ ಹೃದಯಘಾತದಿಂದ ಯುವಕ ಸಾ*ವು

ಕೊಪ್ಪಳ : ಅಂಜನಾದ್ರಿ ಬೆಟ್ಟ ಹತ್ತುವಾಗ ಹೃದಯಘಾತದಿಂದ ಯುವಕನೋರ್ವ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ನಡೆದಿದ್ದು. 17 ವರ್ಷದ ಜಯೇಶ್​ ಯಾದವ್​ ಎಂಬ ಯುವಕ ಮೃತಪಟ್ಟಿದ್ದಾನೆ.

ಇತ್ತೀಚೆಗೆ ಬದುಕಿ ಬಾಳಬೇಕಿರುವ ಯುವ ಸಮುದಾಯ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅದೇ ರೀತಿಯ ಘಟನೆ ನಿನ್ನೆ ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಅಂಜನಾದ್ರಿ ಬೆಟ್ಟದ ಆಂಜನೇಯನ ದರ್ಶನ ಪಡೆಯಲು ಬಂದಿದ್ದ ಯುವಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ : ಚೈನಾ ಸೂಪರ್​ ಪವರ್​ ಆಗಿದೆ, ಆದರೆ ನಾವಿನ್ನು ಗೋಮೂತ್ರ ಕುಡಿಯುತ್ತಿದ್ದೇವೆ : ಕಿಶೋರ್​

ಬೆಟ್ಟ ಹತ್ತುತ್ತಿದ್ದ ಯುವಕ ಜಯೇಶ್​ ಇನ್ನೇನು ಬೆಟ್ಟ ಹತ್ತುವುದು ಮುಗಿದಿದೆ ಎಂದು ಬೆಟ್ಟದ ಅಂತ್ಯ ಭಾಗಕ್ಕೆ ಹೋಗಿದ್ದಾನೆ. ಈ ವೇಳೆ ಏಕಾಏಕಿ ಸುಸ್ತು ಕಾಣಿಸಿಕೊಂಡು, ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಂಬುಲೆನ್ಸ್​ ಕರೆಸಿ ಆಸ್ಪತ್ರೆಗೆ ಕಳುಹಿಸಲಾಯಿತಾದರೂ ಮಾರ್ಗ ಮಧ್ಯೆಯೇ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು.

 

 

Exit mobile version