Monday, August 25, 2025
Google search engine
HomeUncategorizedಹೆಚ್ಡಿಕೆ ಒತ್ತುವರಿ ತೆರೆವು ಮಾಡದಿದ್ರೆ ಜೈಲಿಗೆ ಹೋಗಿ : ಅಧಿಕಾರಿಗಳಿಗೆ ಹೈಕೋರ್ಟ್​​ ಎಚ್ಚರಿಕೆ

ಹೆಚ್ಡಿಕೆ ಒತ್ತುವರಿ ತೆರೆವು ಮಾಡದಿದ್ರೆ ಜೈಲಿಗೆ ಹೋಗಿ : ಅಧಿಕಾರಿಗಳಿಗೆ ಹೈಕೋರ್ಟ್​​ ಎಚ್ಚರಿಕೆ

ಬೆಂಗಳೂರು: ಬಿಡದಿ ಸಮೀಪದ ಕೇತಗಾನಹಳ್ಳಿ ಸರ್ಕಾರಿ ಜಮೀನನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮತ್ತಿತರರಿಂದ ಒತ್ತುವರಿ ಮಾಡಿದ ಆರೋಪ ಪ್ರಕರಣದಲ್ಲಿ ಪ್ರತಿವಾದಿಗಳು ಉನ್ನತ ಸ್ಥಾನದಲ್ಲಿದ್ದಾರೆ ಎಂಬ ಕಾರಣದಿಂದ ಕಳೆದ ಐದು ವರ್ಷಗಳಿಂದ ತೆರವು ಕಾರ್ಯಕ್ಕೆ ಮುಂದಾಗಿಲ್ಲವೇ ಎಂದು ಕಂದಾಯ ಇಲಾಖೆ ಅಧಿಕಾರಿಗಳನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಕೇಂದ್ರ ಸಚಿವ ಹೆಚ್ಡಿಕೆ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಮತ್ತಿತರರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶದಂತೆ ಕ್ರಮಕ್ಕೆ ಮುಂದಾಗದ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್​.ಆರ್​.ಹಿರೇಮಠ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ, ಮುಂದಿನ ಎರಡು ವಾರದಲ್ಲಿ ತೆರವು ಕಾರ್ಯ ಮಾಡಲು ಆಗಲಿದಯೇ ಇಲ್ಲವೇ ಎಂಬುದನ್ನು ತಿಳಿಸಿ, ಅಸಮರ್ಥರು ಎಂದಾರೆ ನಿಮ್ಮನ್ನು ಹದಿನೈದು ದಿನ ಜೈಲಿನಲ್ಲಿರಿಸಿದರೆ ಎಲ್ಲವೂ ಸರಿ ಹೋಗಲಿದೆ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಖುದ್ದು ಹಾಜರಿರುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶ: ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದಿನ ವಿಚಾರಣೆ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿರಬೇಕು ಎಂದು ನ್ಯಾಯಪೀಠ ಆದೇಶಿಸಿತ್ತು. ಅದರಂತೆ ರಾಜೇಂದ್ರ ಕುಮಾರ ಕಟಾರಿಯಾ ಖುದ್ದು ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲು ಮುಂದಾದರು.

ಇದಕ್ಕೆ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನಿಂತೆ ನ್ಯಾಯಾಂಗ ನಿಂದನೆ ಮೊಕದ್ದಮೆಗಳಲ್ಲಿ ಅದೂ ಸಾರ್ಜನಿಕ ಕಾಳಜಿಯುಳ್ಳ ಪ್ರಕರಣಗಳಲ್ಲಿ ಆಡಳಿತಾಂಗಕ್ಕೆ ಕಿಂಚಿತ್ತೂ ಕರುಣೆ ತೋರಬಾರದು ಎಂದಿದೆ. ಇದನ್ನೇ ನಾನೂ ಅನುಸರಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಕೆ ನೀಡಿತು.

ನೆಪ ಹೇಳಿ ತಪ್ಪಿಸಿಕೊಳ್ಳಲು ಅವಕಾಶವೇ ಇಲ್ಲ: ಅಲ್ಲದೆ, ನೀವು ನೆಪ ಹೇಳಿ ತಪ್ಪಿಸಿಕೊಳ್ಳಲು ಅವಕಾಶವೇ ಇಲ್ಲ. ವ್ಯವಸ್ಥೆ ನೋಡಿ ಜನ ನಗುವಂತಾಗಿದೆ. ನೀವೆಲ್ಲಾ ಕೋರ್ಟ್‌ ಆದೇಶಗಳನ್ನು ಪಾಲನೆ ಮಾಡುವವರೆಗೂ ವೇತನ ಕಡಿತ ಮಾಡಿದಲ್ಲಿ ಗೊತ್ತಾಗಲಿದೆ ಎಂದು ತಿಳಿಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮ ಮತ್ತು ಈತನಕ ಹೈಕೋರ್ಟ್‌ಗೆ ಸಲ್ಲಿಸಿರುವ ಅನುಪಾಲನಾ ಪ್ರಮಾಣಪತ್ರಗಳ ಕುರಿತಂತೆ ವಿವರಿಸಲು ಮುಂದಾದರು. ಅಲ್ಲದೆ, ಹೈಕೋರ್ಟ್‌ ಆದೇಶದ ಅನುಪಾಲನೆಗೆ ಮೂರು ತಿಂಗಳು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಈ ಮನವಿಯನ್ನು ಪೀಠ ನಿರಾಕರಿಸಿತು. ಅಲ್ಲದೆ, ಇನ್ನೆರಡು ವಾರಗಳ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ ಏನು?: ಭೂ ಕಬಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರು ಹೊರಡಿಸಿರುವ ಆದೇಶ ಜಾರಿಗೊಳಿಸುವಂತೆ ಹೈಕೋರ್ಟ್‌ ಈ ಹಿಂದೆ ಆದೇಶಿಸಿತ್ತು. ಈ ಆದೇಶ ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್​.ಆರ್.ಹೀರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments