ಕಾರ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಸಾ*ವನ್ನಪ್ಪಿದ ಮಾವ-ಸೊಸೆ

ಹಾಸನ : ಟಿವಿಎಸ್​ ಮೊಪೆಡ್‌ ಮತ್ತು ಟಾಟ ನಿಕ್ಸನ್​ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಾವ-ಸೊಸೆ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದ್ದು. ಮೃತರನ್ನು 50 ವರ್ಷದ ಗಂಗಾಧರ ನಾಯಕ ಮತ್ತು 20 ವರ್ಷದ ಪ್ರಿಯಾ ಎಂದು ಗುರುತಿಸಲಾಗಿದೆ.

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಯಾದಪುರ ಬೈಪಾಸ್‌ನಲ್ಲಿ ಘಟನೆ ನಡೆದಿದ್ದು. ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ KA-37 N-8495 ನಂಬರ‌್‌ನ ಟಾಟಾ ನಿಕ್ಸಾನ್ ಕಾರು ಟಿವಿಎಸ್​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ರಸ್ತೆಗೆ ಅಪ್ಪಳಿಸಿದ್ದು. ಸ್ಥಳದಲ್ಲೆ ಮಾವ ಸೊಸೆ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ :ಖಾಸಗಿ ಕಂಪನಿ ನಡೆಸುವ ಮೆಡಿಸಿನ್ ಪ್ರಯೋಗಕ್ಕೆ ಒಳಗಾಗಿ ವ್ಯಕ್ತಿ ಸಾ*ವು

ಘಟನಾ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES