ಸಾಲಭಾದೆಗೆ ಬೇಸತ್ತು ತನ್ನದೆ ಅಡಿಕೆ ತೋಟದಲ್ಲಿ ಆತ್ಮಹ*ತ್ಯೆ ಶರಣಾದ ರೈತ

ಶಿವಮೊಗ್ಗ: ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನಪೇಟೆ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ.

ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು, ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ ಕೃಷ್ಣ ಪ್ರಗತಿ ಗ್ರಾಮೀಣ ಬ್ಯಾಂಕ್ ಹೊಸನಗರ 13 ಲಕ್ಷ , ತೋಟಗಾರ್ಸ್ ಅಡಿಕೆ ಮಂಡಳಿ ಸಾಗರ 2.5 ಲಕ್ಷ , ಪಿಎಲ್ ಡಿ ಬ್ಯಾಂಕ್ 2.5 ಲಕ್ಷ ಸಾಲವಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಕುಂಭಮೇಳದಲ್ಲಿ ಮಾಂಸದ ಅಡುಗೆ : ಹಿಗ್ಗಾಮುಗ್ಗ ಥಳಿಸಿದ ನಾಗಸಾಧುಗಳು

ಮೃತದೇಹವನ್ನ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES