Site icon PowerTV

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾ*ವು

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ತಿಳಿದು ಬಂದಿದೆ.

ಹೌದು.. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು. ಕನ್ನಡ ಅದ್ಯಯನದಲ್ಲಿ ದ್ವಿತಿಯ ವರ್ಷದ‌ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದ ಪಾವನ ಹೆಚ್.ಎನ್ ಎಂಬ ವಿದ್ಯಾರ್ಥಿನಿ ತಾನೂ ವಾಸಿಸುತ್ತಿದ್ದ ಲೇಡಿಸ್​ ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಧ್ಯಾಹ್ನ 12ರ ಸುಮಾರಿಗೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ತಟಸ್ಥರು ಮತಾಂತರ ಆಗಿದ್ದಾರೆ, ಕುಟುಂಬ ರಾಜಕಾರಣ ಬಿಜೆಪಿಯಲ್ಲಿ ಅಂತ್ಯವಾಗಬೇಕು: ಯತ್ನಾಳ್​

ಹಾಸ್ಟೆಲ್​ನಲ್ಲಿದ್ದ ಕೆಲ ಯುವತಿಯರು ಘಟನೆಯಾಗಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದ್ದು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಸೋಕೋ ಟೀಂ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದು. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version